ಬೆಂಗಳೂರು: ನಿನ್ನೆಯಷ್ಟೇ ಶಾಲೆ ಆರಂಭವಾಗಿದ್ದು, ಕೆಲ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವುದು ಗೊತ್ತಾಗಿದೆ. ಅದರಲ್ಲೂ ಬೆಂಗಳೂರಿನ ಸರ್ಕಾರಿ ಶಾಲೆಯೊಂದರಲ್ಲಿ 231 ಮಕ್ಕಳಿಗೆ ಕಳೆದ 5 ವರ್ಷಗಳಿಂದಲೂ ಒಬ್ಬರೇ ಶಿಕ್ಷಕರು ಪಾಠ ಮಾಡುತ್ತಿದ್ದಾರೆ.
Advertisement
ಬೆಂಗಳೂರಿನ ಮಹದೇವಪುರ ಕ್ಷೇತ್ರದ ಹಾಲನಾಯಕನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 7ನೇ ತರಗತಿವರೆಗೆ 231 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಆದರೆ ಕಳೆದ 5 ವರ್ಷಗಳಿಂದ ಒಬ್ಬರೇ ಶಿಕ್ಷಕರಿಂದ ಪಾಠ-ಪ್ರವಚನ ನಡೆಯುತ್ತಿದೆ. ಹಾಗಾಗಿ ಮಕ್ಕಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಮತಾಂತರ ಕಾಯ್ದೆಗೆ ಕ್ರಿಶ್ಚಿಯನ್ ಸಮುದಾಯದವರು ಭಯ ಬೀಳೋದು ಯಾಕೆ: ಆರಗ ಜ್ಞಾನೇಂದ್ರ
Advertisement
Advertisement
ಕೆ.ಆರ್.ಪುರಂ ವ್ಯಾಪ್ತಿಗೆ ಬರುವ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತರಾಯಪ್ಪ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಹಲವು ಬಾರಿ ಅಧಿಕಾರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಶಿಕ್ಷಕರನ್ನು ನಿಯೋಜಿಸಿದ್ರೆ ಮಾತ್ರ ಶಾಲೆ ಪ್ರಾರಂಭಿಸಲು ಬಿಡ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.