ಕಲುಷಿತ ಕಾಂಗ್ರೆಸ್‌ಗೆ ಹಿಂದುತ್ವ ರುಚಿಸಲ್ಲ, ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪಲ್ಲ: ಜೆಡಿಎಸ್‌ ಕಿಡಿ

Public TV
1 Min Read
HD Kumaraswamy Kalladka Prabhakara Bhat

ಬೆಂಗಳೂರು: ಕಲುಷಿತ ಕಾಂಗ್ರೆಸ್‌ಗೆ (Congress) ಹಿಂದುತ್ವ (Hindutva) ರುಚಿಸುವುದಿಲ್ಲ, ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪುವುದಿಲ್ಲ ಎಂದು ಹೇಳುವ ಮೂಲಕ ಜೆಡಿಎಸ್‌ ಕಿಡಿ ಕಾರಿದೆ.

ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ಅವರ ಶಾಲೆಗೆ ಭೇಟಿ ನೀಡಿದ್ದಕ್ಕೆ ಕಾಂಗ್ರೆಸ್‌ (Congress) ಕಿಡಿಕಾರಿತ್ತು. ಈ ಸಂಬಂಧ ಜೆಡಿಎಸ್‌ (JDS) ಇಂದು ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ ಮಾಡಿ ಆಕ್ರೋಶ ಹೊರ ಹಾಕಿದೆ.

HD Kumaraswamy Kalladka Prabhakara Bhat basana gowda patil yatnal

ಪೋಸ್ಟ್‌ಗಳಲ್ಲಿ ಏನಿದೆ?
ಕಲುಷಿತ ಮನಸ್ಸಿನ ಕಾಂಗ್ರೆಸ್‌ ಕಣ್ಣಿಗೆ ಸದಾ ಕಾಮಾಲೆಯೇ. ಹೆಚ್‌ಡಿ ಕುಮಾರಸ್ವಾಮಿ ಅವರ ನಿಂದನೆಯೇ ಅದಕ್ಕೆ ಅಂಟಿದ ಬೇನೆ. ದೇಶವನ್ನೇ ಒಡೆದ ಪಕ್ಷಕ್ಕೆ ಹಿಂದುತ್ವವೂ ರುಚಿಸುವುದಿಲ್ಲ, ನಮ್ಮ ಆದರ್ಶ ಪರಂಪರೆಯೂ ಆಗುವುದಿಲ್ಲ. ಅಷ್ಟೇ ಏಕೆ, ಭಾರತವೂ ಸಹ್ಯವಲ್ಲ! ಅದರ ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪುವುದೇ ಇಲ್ಲ. ಇದೇನು ಹೊಸತಲ್ಲ.  ಇದನ್ನೂ ಓದಿ: ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಉಗ್ರರಿಂದ ಗುಂಡೇಟು – ಜಮ್ಮು ಕಾಶ್ಮೀರದ ನಿವೃತ್ತ ಪೊಲೀಸ್‌ ಅಧಿಕಾರಿ ಬಲಿ

ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕುಮಾರಸ್ವಾಮಿ ಅವರು ಮುಕ್ತ ಮನಸ್ಸಿನಿಂದ ಭೇಟಿ ನೀಡಿದ್ದರು. ಅಲ್ಲಿನ ಶೈಕ್ಷಣಿಕ ವಾತಾವರಣ, ಮಕ್ಕಳ ಶಿಸ್ತು, ದೇಶಪ್ರೇಮವನ್ನು ಕಣ್ಣಾರೆ ಕಂಡ ಅವರ ಮನಸ್ಸಿನಲ್ಲಿ ಪರಿವರ್ತನೆ ಆಗಿದ್ದರೆ ಅದೇನು ಮಹಾ ಅಪರಾಧವೇ?

ಪರಿವರ್ತನೆಯೇ ಜಗದ ನಿಯಮ, ಪ್ರತಿಗಾಮಿತನವೇ ಮಾರಣಹೋಮ. ತುಷ್ಠೀಕರಣದ ಅಂಟುವ್ಯಾಧಿಯಿಂದ ಬಳಲುತ್ತಿರುವ ಕಾಂಗ್ರೆಸ್‌ ಪಕ್ಷಕ್ಕೆ ಮಾರಣಹೋಮದಲ್ಲಿಯೇ ನಂಬಿಕೆ.

ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಜತೆ ರಾಜ್ಯದ ಅಭಿವೃದ್ಧಿಯ ಬಗ್ಗೆಯೇ ಕುಮಾರಸ್ವಾಮಿ ಅವರು ಚರ್ಚಿಸಿದ್ದಾರೆ. ಸಂಶಯ ಪಿಶಾಚಿ ಕಾಂಗ್ರೆಸ್ಸಿಗೆ ಹುಳುಕು ಹುಡುಕುವುದೇ ಚಟ. ಜಾತಿ, ಧರ್ಮಗಳನ್ನು ಒಡೆದು ದೇಶಕ್ಕೆ ಶಾಪವಾಗಿ, ಬೆದರಿಕೆಯಾಗಿರುವ ಪ್ರತಿಗಾಮಿ ಪಕ್ಷಕ್ಕೆ ಶಾಂತಿ, ಸೌಹಾರ್ದತೆ ಎಂದರೆ ಅಪಥ್ಯ.

 

Share This Article