ಇಂಫಾಲಾ: ಮಣಿಪುರದಲ್ಲಿ (Manipur) ನಡೆದ ಜನಾಂಗೀಯ ಸಂಘರ್ಷದ ಹಿಂದೆ ವಿದೇಶಗಳ ಹಸ್ತಕ್ಷೇಪ ಇರಬಹುದು ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್ (N Biren Singh) ಅನುಮಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಶಾಂತಿ ಭಂಗವಾಗಲು ಚೀನಾ (China) ಕಾರಣ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೇ 3 ರಿಂದ ಗುಡ್ಡಗಾಡು ಜಿಲ್ಲೆಗಳಲ್ಲಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜನೆಯ ನಂತರ ರಾಜ್ಯದಲ್ಲಿ ಹಿಂಸಾಚಾರ ಶುರುವಾಗಿದೆ. ಇದು ಪೂರ್ವ ನಿಯೋಜಿತ ಇರಬಹುದು ಎಂದು ಹೇಳಿದರು.
Advertisement
Advertisement
ಮಣಿಪುರವು ಮ್ಯಾನ್ಮಾರ್‌ನೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ಚೀನಾ ಕೂಡ ಹತ್ತಿರದಲ್ಲಿದೆ. ನಮ್ಮ ಗಡಿಗಳಲ್ಲಿ 398 ಕಿಮೀ ಕಾವಲುರಹಿತವಾಗಿದೆ. ನಮ್ಮ ಗಡಿಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಆದರೆ ದೃಢವಾದ ಮತ್ತು ವ್ಯಾಪಕವಾದ ಭದ್ರತಾ ನಿಯೋಜನೆಯು ಸಹ ಅಂತಹ ವಿಶಾಲತೆಯನ್ನು ಆವರಿಸಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಈ ತಿಂಗಳ ಉಚಿತ ವಿದ್ಯುತ್ ಪಡೆಯೋಕೆ ಜುಲೈ 25 ರೊಳಗೆ ನೋಂದಾಯಿಸಿಕೊಳ್ಳಿ: ಇಂಧನ ಇಲಾಖೆ ಸೂಚನೆ
Advertisement
Advertisement
ಈ ಆರೋಪವನ್ನು ನಾವು ನಿರಾಕರಿಸಲು ಅಥವಾ ದೃಢೀಕರಿಸಲು ಸಾಧ್ಯವಿಲ್ಲ. ಇದು ಪೂರ್ವ ಯೋಜಿತವೆಂದು ತೋರುತ್ತದೆ ಆದರೆ ಕಾರಣ ಸ್ಪಷ್ಟವಾಗಿಲ್ಲ. ರಾಜ್ಯದಲ್ಲಿ ಶಾಂತಿ ನೆಲೆಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದರು. ಮಾತ್ರವಲ್ಲದೆ ರಾಹುಲ್ ಗಾಂಧಿ ಭೇಟಿ ರಾಜಕೀಯ ಪ್ರೇರಿತ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಿಪಕ್ಷ ನಾಯಕರ ಆಯ್ಕೆ ಬಗ್ಗೆ ಕಾಂಗ್ರೆಸ್ ತಲೆ ಕೆರೆದುಕೊಳ್ಳುವುದನ್ನು ಬಿಡಲಿ: ಬಿಜೆಪಿ ತಿರುಗೇಟು
Web Stories