ಲಕ್ನೋ: ಗುರುಗ್ರಾಮದ (Gurugram) ರಸ್ತೆಯಲ್ಲಿ ಬೆತ್ತಲೆಯಾಗಿ ಓಡಾಡುತ್ತಿದ್ದ ವಿದೇಶಿ ಪ್ರಜೆಯೊಬ್ಬನನ್ನು (Foreign National) ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.
ನೈಜೀರಿಯಾದ ಪ್ರಜೆ ಗುರುಗ್ರಾಮದ ರಸ್ತೆಯಲ್ಲಿ ಬೆತ್ತಲಾಗಿ ಓಡಾಡುತ್ತಿದ್ದ ವ್ಯಕ್ತಿ. ಈತ ಗುರುಗ್ರಾಮದ ಟುಲಿಪ್ ಚೌಕ್ ಬಳಿ ರಸ್ತೆಯ ಮಧ್ಯದಲ್ಲಿ ಬೆತ್ತಲಾಗಿ ಓಡಾಡುತ್ತಿರುವುದನ್ನು ಸಾರ್ವಜನಿಕರು ಗಮನಿಸಿ ಪೊಲೀಸರಿಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಘಟನಾ ಸ್ಥಳಕ್ಕೆ ಬಂದಾಗ ಆ ವಿದೇಶಿ ವ್ಯಕ್ತಿ ಹಳ್ಳಿಯ ಕಡೆಗೆ ಓಡಿಹೋಗಿದ್ದಾನೆ. ಅಲ್ಲಿದ್ದ ಸ್ಥಳೀಯ ನಿವಾಸಿಗಳು ಆತನನ್ನು ಹಿಡಿದು ಮರಕ್ಕೆ ಕಟ್ಟಿಹಾಕಿದ್ದಾರೆ. ಇದನ್ನೂ ಓದಿ: ಬೇಳೂರು ರಾಘವೇಂದ್ರ ಶೆಟ್ಟಿ ಮನೆ ಹರಾಜು – ಸೆಕ್ಯುರಿಟಿ ಗಾರ್ಡ್ ಕಣ್ತಪ್ಪಿಸಿ ಅಕ್ರಮ ಪ್ರವೇಶ
Advertisement
Advertisement
ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಾದಶಹಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಮದನ್ ಲಾಲ್ ಮಾತನಾಡಿ, ಆತನ ಮಾನಸಿಕ ಸ್ಥಿತಿ ಸ್ಥಿರವಾಗಿದ್ದರೆ, ಆತನ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್‌ಗೆ ಪ್ರತಿಷ್ಠಿತ ವರ್ಷದ ಗವರ್ನರ್ ಪ್ರಶಸ್ತಿ