ಕೊಪ್ಪಳ: ಅಂಜನಾದ್ರಿಯಲ್ಲಿ (Anjanadri) ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ವಿದೇಶಿ ಮಹಿಳೆ ಎಣಿಕೆ ಕಾರ್ಯದಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮಳ್ಳಿಯ ಅಂಜನಾದ್ರಿ ಬೆಟ್ಟದಲ್ಲಿ ಇಂದು ಹುಂಡಿ ಎಣಿಕೆ ಕಾರ್ಯ ನಡೆಯಿತು. ಇದೇ ವೇಳೆ ಪ್ರವಾಸಕ್ಕೆಂದು ಅಂಜನಾದ್ರಿಗೆ ಬಂದಿದ್ದ ವಿದೇಶಿ ಮಹಿಳೆ ಹುಂಡಿ ಎಣಿಕೆ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಗಮನ ಸೆಳೆದಿದೆ.ಇದನ್ನೂ ಓದಿ: ಅಪಘಾತದ ಬಳಿಕ ಚಾಲಕನಿಗೆ ಭಯ – ಬೇಗ ಹೋಗಪ್ಪ ಅಂದ್ರೂ 30ರ ಮೇಲೆ ಹೋಗಲ್ಲ: ಲಕ್ಷ್ಮಿ ಹೆಬ್ಬಾಳ್ಕರ್
ಇತ್ತೀಚಿನ ದಿನಗಳಲ್ಲಿ ಅಂಜನಾದ್ರಿಗೆ ಬರುವ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಜ.01 ರಿಂದ ಮಾ.07ರವರೆಗಿನ ಅವಧಿಯಲ್ಲಿ ಸಂಗ್ರಹಗೊಂಡ ಕಾಣಿಕೆಯ ಎಣಿಕೆ ಕಾರ್ಯ ಇಂದು ನಡೆದಿದ್ದು, ಒಟ್ಟು 28 ಲಕ್ಷ ರೂ. (28,35,647) ಕಾಣಿಕೆ ಸಂಗ್ರಹವಾಗಿದೆ.
ದೇವಸ್ಥಾನ ಆಡಳಿತಾಧಿಕಾರಿ ಪ್ರಕಾಶ್.ರಾವ್ ಅವರ ನೇತೃತ್ವದಲ್ಲಿ ಹಾಗೂ ಪೊಲೀಸ್ ಬಂದೋಬಸ್ತ್, ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.ಇದನ್ನೂ ಓದಿ: ಹೆಣ್ಣುಮಕ್ಕಳಿಗೆ ಅಟೋ ಕಲಿಸಿಕೊಟ್ಟ ಡಬಲ್ ಸ್ಟಾರ್ ಪ್ರಭಾವತಿಗೆ ನಾರಿ ನಾರಾಯಣಿ ಗೌರವ