ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಯೊಬ್ಬರು (Forensic Laboratory Officer) ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಶ್ರುತಿ ಆತ್ಮಹತ್ಯೆ ಮಾಡಿಕೊಂಡ ಎಫ್‌ಎಸ್‌ಎಲ್ ಅಧಿಕಾರಿ. ಮಡಿವಾಳ ಠಾಣಾ ವ್ಯಾಪ್ತಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಶ್ರುತಿ ಕಳೆದ ಎರಡು ದಿನಗಳ ಹಿಂದೆ ಆತ್ಮಹತ್ಯೆ ಶರಣಾಗಿದ್ದಾರೆ. ಶ್ರುತಿ ಇತ್ತೀಚೆಗೆ ಗಂಡನಿಂದ ವಿಚ್ಛೇದನ (Divorce) ಪಡೆದಿದ್ದರು. ವಿಚ್ಛೇದನ ಪಡೆದ ಘಟನೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.
ಆತ್ಮಹತ್ಯೆಗೆ ಸಂಬಂಧಿಸಿದಂತೆ ಶ್ರುತಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಡೆತ್ ನೋಟ್‌ನಲ್ಲಿ (Death Note) ನನ್ನ ಸಾವಿಗೆ ನಾನೇ ಕಾರಣ ದಯವಿಟ್ಟು ನನಗೆ ಕ್ಷಮಿಸಿ ಎಂದು ವಿಚ್ಛೇದನ ಪಡೆದಿದ್ದ ಪತಿಗೆ ಹಾಗೂ ಪೋಷಕರಿಗೆ ತಿಳಿಸಿದ್ದಾರೆ. ಘಟನೆ ಸಂಬಂಧಿಸಿ ಮಡಿವಾಳ ಪೊಲೀಸ್ ಠಾಣೆಯಲ್ಲಿ (Police Station) ದೂರು ದಾಖಲಾಗಿದೆ.