ರಾಮನಗರ: ಕಾಡಿನಿಂದ ನಾಡಿಗೆ ಪದೇ ಪದೇ ಬಂದು ಸಾಕು ಪ್ರಾಣಿಗಳನ್ನ ಕೊಲ್ಲುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಸೆರೆ ಸಿಕ್ಕ ಘಟನೆ ರಾಮನಗರ ತಾಲೂಕಿನ ನಿಂಗೇಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಸುಮಾರು ಐದು ವರ್ಷದ ಗಂಡು ಚಿರತೆ ಸೆರೆಯಾಗಿದೆ. ಚಿರತೆ ಪದೇ ಪದೇ ನಿಂಗೇಗೌಡನದೊಡ್ಡಿ ಗ್ರಾಮಕ್ಕೆ ಬಂದು ಕುರಿ-ಮೇಕೆಗಳನ್ನು ಕೊಂದು ಹಾಕುತ್ತಿತ್ತು. ಕಳೆದ ವಾರದ ಹಿಂದೆ ಒಂದು ಎಮ್ಮೆಕರು, ಎರಡು ಮೇಕೆಗಳನ್ನು ಕೊಂದು ಹಾಕಿತ್ತು.
Advertisement
ಈ ಹಿನ್ನೆಲೆಯಲ್ಲಿ ಚಿರತೆ ಹಾವಳಿ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಗ್ರಾಮಸ್ಥರು ನೀಡಿದ ದೂರಿನ ಮೇಲೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಆಹಾರ ಅರಸಿ ಬಂದ ಚಿರತೆ ಸೆರೆಯಾಗಿದೆ. ಸೆರೆ ಸಿಕ್ಕ ಚಿರತೆಯನ್ನು ನೋಡಲು ಸ್ಥಳೀಯರು ಮುಗಿಬಿದ್ದಿದ್ದರು. ಬಳಿಕ ರಾಮನಗರ ಅರಣ್ಯ ಅಧಿಕಾರಿಗಳು ಚಿರತೆಯನ್ನ ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ರವಾನಿಸಿದ್ದಾರೆ. ಸದ್ಯಕ್ಕೆ ಚಿರತೆಯನ್ನು ಸೆರೆ ಹಿಡಿದಿದ್ದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
Advertisement