– 9 ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ಹತೋಟಿಗೆ
ಬೆಂಗಳೂರು: ನಗರದ (Bengaluru) ಸುಮ್ಮನಹಳ್ಳಿ (Sumanahalli) ಬ್ರಿಡ್ಜ್ ಬಳಿಯ ಶ್ರೀಗಂಧಕಾವಲ್‍ನ ಅರಣ್ಯ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಮರಗಳು ಹೊತ್ತಿ ಉರಿದಿವೆ.
ಬಿಬಿಎಂಪಿ (BBMP) ವ್ಯಾಪ್ತಿಗೆ ಸೇರಿದ 3 ಎಕರೆ ಅರಣ್ಯ ಪ್ರದೇಶದಲ್ಲಿ ಸುಮಾರು ಅರ್ಧ ಭಾಗಕ್ಕೆ ಬೆಂಕಿ ಆವರಿಸಿದೆ. ತೀವ್ರ ಬೇಸಿಗೆಯ ಪರಿಣಾಮ ಬೆಂಕಿ ಭಾರೀ ಪ್ರಮಾಣದಲ್ಲಿ ವ್ಯಾಪಿಸಿದೆ. ಒಣ ಕಸಕ್ಕೆ ಹಾಕಿದ ಬೆಂಕಿ ಅರಣ್ಯ ಪ್ರದೇಶಕ್ಕೆ ಹಬ್ಬಿದೆ ಎಂದು ಶಂಕಿಸಲಾಗಿದೆ. ಗುರುವಾರ ರಾತ್ರಿಯೇ ಅರಣ್ಯ ಪ್ರದೇಶಕ್ಕೆ ಬೆಂಕಿ ತಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕಾಂಬೋಡಿಯಾದ ಸೇನಾನೆಲೆಯಲ್ಲಿ ಮದ್ದುಗುಂಡುಗಳ ಸ್ಫೋಟ – 20 ಸೈನಿಕರು ಸಾವು
ನಗರದಲ್ಲಿ ತೆರವುಗೊಳಿಸಿದ ಮರಗಳನ್ನು ಇಲ್ಲಿ ತಂದು ಡಂಪ್ ಮಾಡಲಾಗುತ್ತಿತ್ತು. ಅದೇ ರೀತಿ ಹೊರಗಡೆ ಮಾರಾಟ ಮಾಡುವ ಕಟ್ಟಿಗೆಗಳನ್ನು ಇಲ್ಲಿ ತಂದು ಹಾಕಿ ಹರಾಜು ಮಾಡಲಾಗ್ತಿತ್ತು. ಹರಾಜಾಗದೇ ಉಳಿದಿದ್ದ ಕಟ್ಟಿಗೆಗಳೆಲ್ಲ ಅರಣ್ಯ ವ್ಯಾಪ್ತಿಯಲ್ಲಿ ರಾಶಿ ಬಿದ್ದಿದ್ದವು. ತೀವ್ರ ಬಿಸಿಲಿನ ಕಾರಣ ಸಂಪೂರ್ಣ ಒಣಗಿದ್ದ ಮರದ ತುಂಡುಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಸಾಧ್ಯತೆಯೂ ಇದೆ ಎಂಬುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ.
ಸತತ 9 ಗಂಟೆಗಳಿಂದ ನಿರಂತರ ಕಾರ್ಯಾಚರಣೆ ನಡೆಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೆÇಲೀಸರು ಮತ್ತು ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಅಂಬುಲೆನ್ಸ್‌ನಿಂದ ಸರಣಿ ಅಪಘಾತ – ಚಾಲಕನ ಬಂಧನ