ಮುಳ್ಳಯ್ಯನಗಿರಿ ಗುಡ್ಡದಲ್ಲಿ ಹಬ್ಬಿದ ಕಾಡ್ಗಿಚ್ಚು – ನೂರಾರು ಎಕರೆ ಅರಣ್ಯ ಭಸ್ಮ

Public TV
2 Min Read
Chikkamagalauru Mullayanagiri

– ಮುಗಿಲೆತ್ತರಕ್ಕೆ ನೀರು ಚಿಮ್ಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ

ಚಿಕ್ಕಮಗಳೂರು: ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಹಾಗೂ ದೇಶ-ವಿದೇಶಿಗರ ನೆಚ್ಚಿನ ಪ್ರವಾಸಿ ತಾಣವು ಆಗಿರುವ ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿ ಬೆಟ್ಟದಲ್ಲಿ (Mullayanagiri Peak) ಕಾಡ್ಗಿಚ್ಚು ಹಬ್ಬಿದ್ದು, ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ.

ಎತ್ತರ ಹಾಗೂ ಇಳಿಜಾರಿನ ಬೆಟ್ಟಕ್ಕೆ ಬೆಂಕಿ ವ್ಯಾಪಿಸಿರುವುದರಿಂದ ಕೆಲ ಸ್ಥಳಕ್ಕೆ ಹೋಗಲು ಅರಣ್ಯ ಹಾಗೂ ಅಗ್ನಿಶಾಮಕ ಸಿಬ್ಬಂದಿಗೂ ಸಾಧ್ಯವಾಗುತ್ತಿಲ್ಲ. ಆದರೂ, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಮುಳ್ಳಯ್ಯನಗಿರಿ ತಪ್ಪಲು ಎಂದರೇನೆ ಅಪರೂಪದ ಸಸ್ಯ ಸಂಪತ್ತಿನ ರಾಶಿ. ಬಿಸಿಲಿನ ಝಳಕ್ಕೆ ಬೆಂಕಿಯ ಕೆನ್ನಾಲಿಗೆ ಹೆಚ್ಚಿದ ಪರಿಣಾಮ ನೂರಾರು ಎಕರೆ ಅಪರೂಪದ ಸಸ್ಯರಾಶಿ ಕೂಡ ಸುಟ್ಟು ಭಸ್ಮವಾಗಿದೆ. ಇದನ್ನೂ ಓದಿ: ಹೆಣ್ಣು ಭ್ರೂಣ ಹತ್ಯೆ ಪ್ರಕರಣ – ಸಿಐಡಿಯಿಂದ ಆರೋಗ್ಯ ಇಲಾಖೆಗೆ ವರದಿ ಕೊಡಲು ಸಿದ್ಧತೆ

chikkamagaluru mullayanagiri

ಸ್ಥಳಕ್ಕೆ ಭೇಟಿ ನೀಡಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅರಣ್ಯ ಇಲಾಖೆ, ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ ಜೊತೆ ಸ್ಥಳೀಯರು ಕೂಡ ಬೆಂಕಿ ನಂದಿಸಲು ಕೈಜೋಡಿಸಿದ್ದಾರೆ. ಆದರೆ, ಭಾರೀ ಗಾಳಿಗೆ ಬೆಂಕಿಯ ಜ್ವಾಲೆ ಹರಡುತ್ತಲೇ ಇದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹೋರಾಡುತ್ತಿದ್ದಾರೆ. ಇಂದು ಭಾನುವಾರವಾದ್ದರಿಂದ ನೂರಾರು ಪ್ರವಾಸಿಗರು ಕೂಡ ಮುಳ್ಳಯ್ಯನಗಿರಿಗೆ ಭೇಟಿ ನೀಡಿದ್ದಾರೆ. ಮುಳ್ಳಯ್ಯನಗಿರಿ ಮಾರ್ಗದಲ್ಲೇ ಬೆಂಕಿ ಹೊತ್ತಿರುವುದರಿಂದ ರಸ್ತೆ ಬದಿಯಲ್ಲೂ ಬೆಂಕಿ ಹೊತ್ತಿಕೊಂಡಿದ್ದು, ಕೆಲ ಪ್ರವಾಸಿಗರು ಮುಳ್ಳಯ್ಯನಗಿರಿಯಿಂದ ಚಿಕ್ಕಮಗಳೂರಿಗೆ ಬರಲು ಸಾಧ್ಯವಾಗದೇ ಮುಳ್ಳಯ್ಯನಗಿರಿ ಮಾರ್ಗದಲ್ಲೇ ಜಾಮ್ ಆಗಿದ್ದಾರೆ. ಇದನ್ನೂ ಓದಿ: ಉದ್ಯೋಗ ಕೊಡಿಸುವ ನೆಪದಲ್ಲಿ 20 ಮಹಿಳೆಯರ ಮೇಲೆ ಗ್ಯಾಂಗ್‌ರೇಪ್ – ಇಬ್ಬರ ವಿರುದ್ಧ ದೂರು ದಾಖಲು

ಅರಣ್ಯ ಅಧಿಕಾರಿಗಳು ಬೆಂಕಿಯ ಜ್ವಾಲೆ ಸ್ವಲ್ಪ ಕಡಿಮೆಯಾದ ಬಳಿಕ ಕಳುಹಿಸುತ್ತೇವೆ ಎಂದು ಹೇಳಿ ಅಲ್ಲೇ ಉಳಿಸಿಕೊಂಡಿದ್ದಾರೆ. ಆದರೆ, ಬೆಂಕಿಯಿಂದ ಪ್ರವಾಸಿಗರು ಸೇರಿದಂತೆ ಯಾರಿಗೂ ತೊಂದರೆಯಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿ ರಸ್ತೆಯಲ್ಲಿ ನಿಂತು ಮುಗಿಲೆತ್ತರಕ್ಕೆ ನೀರು ಚಿಮ್ಮಿಸುವ ಮೂಲಕ ಇಳಿಜಾರಿನ ಗುಡ್ಡದ ಬೆಂಕಿಯನ್ನು ನಂದಿಸಿದ್ದಾರೆ. ಬಿಸಿಲ ಧಗೆಗೆ ಅರಣ್ಯ ಸಂಪೂರ್ಣ ಒಣಗಿ ನಿಂತಿರುವುದರಿಂದ ನೋಡ-ನೋಡುತ್ತಿದ್ದಂತೆ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದ್ದು, ಪ್ರಾಣಿ-ಪಕ್ಷಿಗಳು ಕೂಡ ಜೀವ ತೆತ್ತಿದ್ದಾವೆ. ಇದನ್ನೂ ಓದಿ: ಪ್ರೀತಿಸಲು ಒಪ್ಪದ ಬಾಲಕಿ ಕೊಂದಿದ್ದವನಿಂದ ಆತ್ಮಹತ್ಯೆ ಯತ್ನ- ಸಾಯಲು ಬಿಡಿ ಎಂದು ಡ್ರಾಮಾ

Share This Article