ಬೆಂಗಳೂರು: ಕಾಡಾನೆ ದಾಳಿಗೆ ಫಾರೆಸ್ಟ್ ಗಾರ್ಡ್‌ವೊಬ್ಬರು (Forest Guard) ಮೃತಪಟ್ಟಿರುವ ಘಟನೆ ಆನೇಕಲ್‌ನಲ್ಲಿ (Anekal) ನಡೆದಿದೆ. ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಮಾದಪ್ಪ (45) ಆನೆ ದಾಳಿಗೆ ಮೃತಪಟ್ಟ ಪಾರೆಸ್ಟ್ ಗಾರ್ಡ್. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ – ರಾಯಚೂರಿನಲ್ಲಿ ಇಡಿ ವಿಚಾರಣೆ ಅಂತ್ಯ
ರಾತ್ರಿ 11 ಗಂಟೆ ಸುಮಾರಿಗೆ ಕಾಡಾನೆ ಬಂದಿತ್ತು. ಆನೆ ಬಂದಿರುವುದನ್ನು ನೋಡಿ ಫಾರೆಸ್ಟ್ ಗಾರ್ಡ್ ಓಡಿಸಲು ಹೋಗಿದ್ದರು. ಆಗ ಮಾದಪ್ಪನ ಮೇಲೆ ಆನೆ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡಿದ್ದ ಮಾದಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಳೆದ ಆರು ತಿಂಗಳಲ್ಲಿ ಒಂದೇ ಗ್ರಾಮದ ಮೂವರು ಆನೆ ದಾಳಿಗೆ ಬಲಿಯಾಗಿದ್ದಾರೆ. ಇದಕ್ಕೆ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಗುರುವಾರ ರಾತ್ರಿ 11 ಗಂಟೆಯಿಂದ ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಪರಿಣಾಮವಾಗಿ ಪೊಲೀಸರು ಸ್ಥಳದಲ್ಲೇ ಮೊಕ್ಕಂ ಹೂಡಿದ್ದಾರೆ. ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಭೂಕುಸಿತ – ಕಾರ್ಮಿಕ ದುರ್ಮರಣ
ಪದೇ ಪದೆ ಆನೆ ದಾಳಿಗೆ ಜನ ಬಲಿಯಾಗುತ್ತಿದ್ದಾರೆ. ಆದರೆ ಅರಣ್ಯ ಇಲಾಖೆ ದುಡಿಸಿಕೊಂಡು ಯಾವುದೇ ಪರಿಹಾರ ನೀಡುತ್ತಿಲ್ಲ. ಜೀವಕ್ಕೆ ಬೆಲೆ ಇಲ್ಲದಾಗಿದೆ ಎಂದು ಅರಣ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ.