ಕಾಂತಾರಾ-2 ಶೂಟಿಂಗ್ (Kantara 2) ವಿವಾದಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwara Khandre) ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆಯಾಗಿಲ್ಲ ಎಂಬುದು ಪ್ರಾಥಮಿಕ ವರದಿ ಎಂದು ಸಚಿವರು ತಿಳಿಸಿದ್ದಾರೆ.
ಸಿನಿಮಾ ಚಿತ್ರೀಕರಣಕ್ಕೆ ನಿಯಮಾವಳಿ ಪ್ರಕಾರ ಅನುಮತಿ ನೀಡಲಾಗಿದೆ. ನಮ್ಮ ಅರಣ್ಯ ಭೂಮಿಯಲ್ಲಿ ಚಿತ್ರೀಕರಣ ಮಾಡಿಲ್ಲ, ಕಂದಾಯ ಜಮೀನಿನಲ್ಲಿ ಮಾಡಿದ್ದಾರೆ ಎಂದು ಪ್ರಾಥಮಿಕ ವರದಿ ಬಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: BBK 11: ಫಿನಾಲೆ ವಾರಕ್ಕೆ ಘಟಾನುಘಟಿ ಸ್ಪರ್ಧಿಗಳು ಎಂಟ್ರಿ
Advertisement
Advertisement
ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆ ಆಗಿಲ್ಲ ಎಂಬುದು ಪ್ರಾಥಮಿಕ ವರದಿ. ಆದರೂ ಸಂಪೂರ್ಣ ವರದಿ ಸಲ್ಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಾಧ್ಯಮಗಳಲ್ಲಿ ಬಂದ ವರದಿಯ ಅನ್ವಯ ಸೂಚನೆ ಕೊಟ್ಟಿದ್ದೇನೆ. ನಿಯಮಗಳ ಪ್ರಕಾರ ಅನುಮತಿ ಕೊಡಲಾಗಿತ್ತು. ಆದರೆ, ಅದು ಕಂದಾಯ ಭೂಮಿ, ಗೋಮಾಳ ಎನ್ನಲಾಗಿದೆ. ಅರಣ್ಯ ಭೂಮಿಯಲ್ಲಿ ಉಲ್ಲಂಘನೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ಕಾಂತಾರ-2 ಚಿತ್ರತಂಡ ಷರತ್ತುಗಳನ್ನು ಉಲ್ಲಂಘಿಸಿ ವನ್ಯಜೀವಿಗಳಿಗೆ ಅಥವಾ ಸಸ್ಯಸಂಕುಲಕ್ಕೆ ಹಾನಿ ಮಾಡಿದ್ರೇ ಚಿತ್ರೀಕರಣ ಸ್ಥಗಿತಗೊಳಿಸಲು ಕ್ರಮ ವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ನಿರ್ದೇಶಕರಿಗೆ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ನಾನು ಸ್ವಲ್ಪ ಕೋಪಿಷ್ಠ ಅದೇ ಸಮಸ್ಯೆ – ನಟ ದುನಿಯಾ ವಿಜಯ್
Advertisement
ಹಾಸನ ಜಿಲ್ಲೆಯ ಸಕಲೇಶಪುರ ಯಸಳೂರು ಭಾಗದಲ್ಲಿ ತಾತ್ಕಾಲಿಕವಾಗಿ ಸೆಟ್ ನಿರ್ಮಾಣ ಮಾಡಲು ಜ.3 ರಿಂದ ಜ.15 ರವರೆಗೆ ಅವಕಾಶ ನೀಡಲಾಗಿತ್ತು. ಜೊತೆಗೆ ಜ.15 ರಿಂದ ಜ.25 ರ ವರೆಗೆ 23 ದಿನ ಶೂಟಿಂಗ್‌ಗೆ ಅವಕಾಶ ನೀಡಲಾಗಿದೆ. ಆದರೆ, ಕಾಂತಾರ ಚಿತ್ರತಂಡ ಕಾಡಿನಂಚಿನ ಅರಣ್ಯ ಪ್ರದೇಶದ ಬಳಿ ನಡೆಸುತ್ತಿರುವ ಚಿತ್ರೀಕರಣದ ವೇಳೆ ಸ್ಫೋಟಕ ಬಳಕೆಯ ಬಗ್ಗೆ ಆರೋಪ ಕೇಳಿಬಂದಿತ್ತು.