ಮೈಸೂರು: ಇಲ್ಲಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ಅಬಕಾರಿ (Excise) ಜಂಟಿ ಆಯುಕ್ತರು ದಾಳಿ ನಡೆಸಿದ್ದು, ಒಟ್ಟು 98.52 ಕೋಟಿ ರೂ. ಮೊತ್ತದ ಬಿಯರ್ ದಾಸ್ತಾನು ಜಪ್ತಿ ಮಾಡಿದ್ದಾರೆ.
ಮೈಸೂರು (Mysuru) ಜಿಲ್ಲೆಯ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಬಿಯರ್ (Beer) ತಯಾರಿಕಾ ಘಟಕದಲ್ಲಿ ಸರ್ಕಾರಕ್ಕೆ ತೋರಿಸಿರುವ ದಾಸ್ತಾನು ಲೆಕ್ಕಕ್ಕಿಂತ ಅಧಿಕ ದಾಸ್ತಾನು ಸಂಗ್ರಹ ಪತ್ತೆಯಾಗಿದೆ. 7000 ಸಾವಿರ ವಿವಿಧ ಬ್ರಾಂಡಿನ ಪೆಟ್ಟಿಗೆಗಲ್ಲಿ ಬಿಯರ್ ಬಾಟಲಿಗಳು ಪತ್ತೆಯಾಗಿದೆ. ಯುಟಿ ಟ್ಯಾಂಕ್, ಸೈಲೋಸ್ ಟ್ಯಾಂಕ್‌ಗಳಲ್ಲಿರುವ ಕಚ್ಚಾ ವಸ್ತು ಸಮೇತ ಜಪ್ತಿ ಮಾಡಿದ್ದು, ಈ ಸಂಬಂಧ 17 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಮೂರು ವರ್ಷಗಳ ನಂತರ ಬೆಂಗಳೂರಿನಲ್ಲಿ ಶೂನ್ಯ ಮಳೆ ದಾಖಲು
Advertisement
Advertisement
ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಬಂದ ಅನಾಮಧೇಯ ಕರೆಯ ಮೇರೆಗೆ ಚುನಾವಣಾಧಿಕಾರಿಗಳು ಹಾಗೂ ಅಬಕಾರಿ ಜಂಟಿ ಆಯುಕ್ತರು ಘಟಕಕ್ಕೆ ಭೇಟಿ ನೀಡಿ ದಾಖಲೆ ಪರಿಶೀಲಿಸಿದಾಗ ಲೆಕ್ಕಪುಸ್ತಕದ ದಾಸ್ತಾನಿಗಿಂತ ಹೆಚ್ಚಿನ ಬಿಯರ್ ದಾಸ್ತಾನು ಕಂಡುಬಂದಿದೆ. ಈ ಹಿನ್ನೆಲೆ ಅವುಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ – ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆ
Advertisement