ಬೆಂಗಳೂರು: ರಾಜ್ಯದಲ್ಲಿ ಫಾರ್ಮ್ 7 ದುರುಪಯೋಗವಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಲು ಸರ್ಕಾರ ವಿಶೇಷ ತನಿಖಾ ತಂಡ (SIT) ರಚನೆ ಮಾಡಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಒತ್ತಾಯಿಸಿದ್ದಾರೆ.
ಜಯನಗರದಲ್ಲಿ ಫಾರ್ಮ್ 7 ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಸೌಮ್ಯಾ ರೆಡ್ಡಿ ದೂರು ನೀಡಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ಈಗಾಗಲೇ FIR ದಾಖಲಾಗಿದೆ ಎಂದು ಹೇಳಿದರು.
ಸಿಎಂ ಜೊತೆ ಸೇರಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಬಿಜೆಪಿ ಶಾಸಕರ ಕಚೇರಿಯಿಂದ RSS ಕುಮ್ಮಕ್ಕಿನಿಂದ ಕಾಂಗ್ರೆಸ್ ಮತಗಳನ್ನು ಕದಿಯುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.
ಜಯನಗರದಲ್ಲಿ ಈ ಬಗ್ಗೆ ಆಡಿಯೋ ಕೂಡ ವೈರಲ್ ಆಗಿದೆ. ಸೌಮ್ಯಾ ರೆಡ್ಡಿ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಯಬೇಕು. RSS ಕುಮ್ಮಕ್ಕಿನಿಂದ ಹಾಗೂ ಬಿಜೆಪಿ ಪಕ್ಷದಿಂದ ಈ ಕೆಲಸ ನಡೆಯುತ್ತಿದೆ ಎಂಬ ಆರೋಪದ ಬಗ್ಗೆ ಆಡಿಯೋ ಆಧರಿಸಿ ತನಿಖೆ ನಡೆಸಬೇಕು ಎಂದು ಹೇಳಿದರು. ಇದನ್ನೂ ಓದಿ: ಶೋ ಮಾಡೋದಕ್ಕೆ ನನ್ನ ವಿರುದ್ದ ದೂರು ನೀಡಿದ್ದಾರೆ: ರಾಮಮೂರ್ತಿ
CID ತನಿಖೆ ನಡೆಸಲಿ ಅಥವಾ SIT ರಚನೆ ಮಾಡಲಿ. ರಾಜ್ಯದ ಹಲವು ಕಡೆ ದೂರುಗಳು ದಾಖಲಾಗುತ್ತಿವೆ. ಹೀಗಾಗಿ ಸರ್ಕಾರ SIT ರಚಿಸಿ ತನಿಖೆ ನಡೆಸಬೇಕು ಎಂದು ರಾಮಲಿಂಗಾರೆಡ್ಡಿ ಒತ್ತಾಯಿಸಿದರು. ಇದನ್ನೂ ಓದಿ: ವಸುದೈವ ಕುಟುಂಬಕಂ: ಪೊಗರು ನಂತರ ಮತ್ತೆ ಒಂದಾದ ಜೋಡಿ

