– ಅಪಪ್ರಚಾರದಿಂದ ಹತಾಶರಾಗಬೇಡಿ ಎಂದ ಸಿಎಂ
ಬೆಂಗಳೂರು: ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ (Guarantee Scheme) ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಘೋಷಣೆ ಮಾಡಿದರು.
Advertisement
ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ಸುಮಾರು 31 ಜನ ಸದಸ್ಯರು ಇರಲಿದ್ದು, ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವ ಧನ ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ. ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು ಎಂದರು. ಇದನ್ನೂ ಓದಿ: ಸ್ತಬ್ಧಚಿತ್ರ ವಿಷಯದಲ್ಲಿ ಕೇಂದ್ರಕ್ಕೆ ದುರುದ್ದೇಶ ಇಲ್ಲ: ವಿಜಯೇಂದ್ರ
Advertisement
Advertisement
ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ. ಕಾರ್ಯಕರ್ತರಿಗೆ, ಶಾಸಕರಲ್ಲದವರಿಗೆ, ಸಂಸದರಲ್ಲದವರಿಗೆ, ಸಮಿತಿ ಸದಸ್ಯತ್ವ ದೊರೆಯಲಿದೆ. ವಿವಿಧ ಇಲಾಖೆಗಳ ಸಮಿತಿಗಳನ್ನು ಕೂಡಲೇ ರಚಿಸಲು ಆಯಾ ಇಲಾಖೆಗಳ ಸಚಿವರ ವಿವೇಚನೆಗೆ ಬಿಡಲಾಗಿದೆ. ಹೆಸರುಗಳನ್ನು ಪಡೆಯುವಾಗ, ನಮ್ಮ ಶಾಸಕರು, ಸಂಸದರ ಸಲಹೆ ಪಡೆಯುವಂತೆ ಸೂಚಿಸಿದರು. ಕೆಲವು ಶಾಸಕರಿಗೆ, ವಿಧಾನಸಭೆ ಟಿಕೆಟ್ ದೊರೆಯದವರಿಗೆ ಅವಕಾಶ ಕಲ್ಪಿಸಲಾಗುವುದು. ಎರಡು ವರ್ಷಗಳ ಅವಧಿ ಇರಲಿದೆ. ಕಾರ್ಯಕರ್ತರ ಶ್ರಮದಿಂದ ಪಕ್ಷ ಗಟ್ಟಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಾಮಮಂದಿರ ದೇಶದ ಕತೆಯ ಪ್ರತಿಬಿಂಬ; ರಾಮನ ಬಗ್ಗೆ ಅಪಪ್ರಚಾರ ಸಲ್ಲದು: ಗುರೂಜಿ ರಿತೇಶ್ವರ್ ಮಹಾರಾಜ್
Advertisement
ಭಾರತ್ ಜೋಡೋ ನ್ಯಾಯ ಯಾತ್ರಾ:
ಲೋಕಸಭಾ ಚುನಾವಣೆ (Lok Sabha Election) ಗೆಲ್ಲಲು ನಾವೆಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ರಾಹುಲ್ ಗಾಂಧಿ (Rahul Gandhi) ಅವರು 14ನೇ ತಾರೀಖಿನಿಂದ 14 ರಾಜ್ಯಗಳಲ್ಲಿ 85 ಜಿಲ್ಲೆಗಳಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರಾ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಹೋಗಲ್ಲ: ಕಾಂಗ್ರೆಸ್
ಸಕಾರಾತ್ಮಕವಾಗಿರಿ:
ಚುನಾವಣೆಯನ್ನು ನಾವು ಗೆಲ್ಲಲೇಬೇಕು. ಇಷ್ಟೆಲ್ಲಾ ಮಾಡಿಯೂ ನಾವು ಗೆಲ್ಲದೇ ಹೋದರೆ ಅದು ನಮಗೆ ಹಿನ್ನಡೆಯಾಗಲಿದೆ. ನಾವು ಗೆಲ್ಲಲೇಬೇಕು. 28 ಕ್ಕೆ 28 ಸೀಟನ್ನು ಗೆಲ್ಲಬೇಕು. ಕನಿಷ್ಠ 26 ಸೀಟು ಗೆಲ್ಲಬೇಕು. ಜನರ ನಾಡಿ ಮಿಡಿತ ನಮ್ಮ ಪರವಾಗಿರುವುದರಿಂದ ಅಪಪ್ರಚಾರದಿಂದ ನಾವು ಯಾರೂ ಹತಾಶರಾಗಬಾರದು. ಸಕಾರಾತ್ಮಕವಾಗಿರಬೇಕು ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ಲೋಕಸಭೆ ಚುನಾವಣೆ 2024 – ಶಾಸಕರು, ಮಾಜಿ ಸಚಿವರಿಗೆ ಟಿಕೇಟ್ ನೀಡಲು SP ಪ್ಲ್ಯಾನ್