ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆ, ಮೇಲ್ವಿಚಾರಣೆಗಾಗಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ (Tushar Giri Nath) ಅವರು ವಲಯ ಮಟ್ಟದಲ್ಲಿ ‘ಟಾಸ್ಕ್ ಫೋರ್ಸ್” ಸಮಿತಿ ರಚಿಸಿ ಆದೇಶಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 12,878 ಕಿಮೀ ರಸ್ತೆ ಜಾಲವಿದ್ದು, ಈ ರಸ್ತೆಗಳ ಪೈಕಿ 1,344.84 ಕಿಮೀ ಉದ್ದದ ರಸ್ತೆಗಳನ್ನು ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳೆಂದು ಪರಿಗಣಿಸಲಾಗಿದೆ. ಈ ರಸ್ತೆಗಳನ್ನು, ರಸ್ತೆ ಮೂಲಭೂತ ಸೌಕರ್ಯ ಶಾಖೆಯಿಂದ ನಿರ್ವಹಣೆ ಮಾಡಲಾಗುತ್ತಿದೆ. ಉಳಿಕೆ 11,533.16 ಕಿಮೀ ರಸ್ತೆಗಳನ್ನು ವಲಯ ಮಟ್ಟದಲ್ಲಿ ನಿರ್ವಹಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ಪ್ರಣಾಳಿಕೆ ಭರವಸೆಯಿಂದಾಗುವ ಆರ್ಥಿಕ ಲಾಭ ಅಭ್ಯರ್ಥಿಯ ಭ್ರಷ್ಟಾಚಾರವಲ್ಲ – ಜಮೀರ್‌ಗೆ ಸುಪ್ರೀಂ ರಿಲೀಫ್
Advertisement
Advertisement
ಗುಂಡಿ ಬಿದ್ದಿರುವ ರಸ್ತೆಗಳನ್ನು (Pothole Roads) ನಿಗಧಿತ ಅವಧಿಯಲ್ಲಿ ನಿರ್ವಹಣೆ ಮಾಡಲು ವಲಯ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡುವುದು ಸೂಕ್ತವೆಂದು ತೀರ್ಮಾನಿಸಿ, ಸದರಿ ಟಾಸ್ಕ್ ಫೋರ್ಸ್ ಅನ್ನು ವಲಯ ಮಟ್ಟದ ವಲಯ ಆಯುಕ್ತರು ಅವರ ನೇತೃತ್ವದಲ್ಲಿ ರಚಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ಇದನ್ನೂ ಓದಿ: T20 World Cup: ಚುಟುಕು ಕ್ರಿಕೆಟ್ ಯುಗದ ಆರಂಭ – ಚೊಚ್ಚಲ ಆವೃತ್ತಿಯಲ್ಲೇ ಭಾರತ ಚಾಂಪಿಯನ್!
Advertisement
Advertisement
ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಯಾರೆಲ್ಲ ಇದ್ದಾರೆ?
1. ವಲಯ ಆಯುಕ್ತರು – ಅಧ್ಯಕ್ಷರು.
2. ವಲಯ ಜಂಟಿ ಆಯುಕ್ತರು – ಸದಸ್ಯರು.
3. ವಲಯ ಮುಖ್ಯ ಅಭಿಯಂತರರು – ಸದಸ್ಯರು.
4. ವಲಯ ಸಹಾಯಕ ಸಂಚಾರ ಪೊಲೀಸ್ ಆಯುಕ್ತರು – ಸದಸ್ಯರು.
5. ವಲಯದ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರು – ಸದಸ್ಯರು.
6. ವಲಯ ವ್ಯಾಪ್ತಿಗೆ ಬರುವ ಸಂಬಂಧಪಟ್ಟ ವಿಭಾಗದ ಕಾರ್ಯಪಾಲಕ ಅಭಿಯಂತರರು – ಸದಸ್ಯರು.
7. ವಲಯ ಆಯುಕ್ತರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಉಪ ನಿಯಂತ್ರಕರು (ಹಣಕಾಸು) – ಸದಸ್ಯರ ಕಾರ್ಯದರ್ಶಿ.