ಬೆಂಗಳೂರು: ಆಪ್ (AAP) ಪಕ್ಷದ ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ, ಬೆಂಗಳೂರು ನಗರದ ಮಾಜಿ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ (Bhaskar Rao) ಬುಧವಾರ ಬಿಜೆಪಿ ಸೇರಲಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Delhi CM Arvind Kejriwal) ಮಾರ್ಚ್ 4 ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಬೆನ್ನಲ್ಲೇ ಪಕ್ಷಕ್ಕೆ ಶಾಕಿಂಗ್ ಎಂಬಂತೆ ಭಾಸ್ಕರ್ ರಾವ್ ಕಮಲ ಧ್ವಜ ಹಿಡಿಯಲಿದ್ದಾರೆ.
Advertisement
Advertisement
ಮಂಗಳವಾರ ಬೆಳಗ್ಗೆ ಬಿಜೆಪಿ ಕಚೇರಿಗೆ ಭೇಟಿ ಕೊಟ್ಟಿದ್ದ ಭಾಸ್ಕರ್ ರಾವ್ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯ ಚುನಾವಣಾ ಸಹ ಉಸ್ತುವಾರಿ ಕೆ ಅಣ್ಣಾಮಲೈ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆ ಚರ್ಚಿಸಿದ್ದರು. ಇದಾದ ಬಳಿಕ ಸಚಿವ ಆರ್ ಅಶೋಕ್ ಜೊತೆಗೂ ಪದ್ಮನಾಭನಗರದಲ್ಲಿ ಭಾಸ್ಕರ್ ರಾವ್ ಮಾತುಕತೆ ನಡೆಸಿದ್ದರು.
Advertisement
ಮಾತುಕತೆಯ ಬಳಿಕ ಭಾಸ್ಕರ್ ರಾವ್ ಸೇರ್ಪಡೆ ಬಗ್ಗೆ ಬಿಜೆಪಿ ನಾಯಕರು ವರಿಷ್ಠರ ಗಮನಕ್ಕೆ ತಂದಿದ್ದರು. ಭಾಸ್ಕರ್ ರಾವ್ ಪಕ್ಷ ಸೇರ್ಪಡೆಗೆ ಹೈಕಮಾಂಡ್ ಅನುಮತಿ ನೀಡಿದೆ. ಇದನ್ನೂ ಓದಿ: 14 ಕಡೆ ಕುಕ್ಕರ್ ಬ್ಲಾಸ್ಟ್ ಆಗಿದೆ, ತಗೊಳೋ ಮುನ್ನ ಎಚ್ಚರ: ರಮೇಶ್ ಜಾರಕಿಹೊಳಿ
Advertisement
ರಾಜಕೀಯ ಪಕ್ಷ ಸೇರಿ ಚುನಾವಣೆ ಸ್ಪರ್ಧಿಸುವ ಉದ್ದೇಶದಿಂದ ಹುದ್ದೆಗೆ ಭಾಸ್ಕರ್ ರಾವ್ ರಾಜೀನಾಮೆ ನೀಡಿ 2022ರ ಏಪ್ರಿಲ್‌ನಲ್ಲಿ ಆಪ್ ಪಕ್ಷವನ್ನು ಸೇರ್ಪಡೆಯಾಗಿದ್ದರು. ಆಪ್‌ನಿಂದ ಬಸವನಗುಡಿ ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದರು.