ಪಾಟ್ನಾ: ಬಿಹಾರದ (Bihar) ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ (Sushil Kumar Modi) ಅವರು ಸೋಮವಾರ 72ನೇ ವಯಸ್ಸಿನಲ್ಲಿ ಸೋಮವಾರ ನಿಧನರಾಗಿದ್ದಾರೆ.
ಸುಶೀಲ್ ಕುಮಾರ್ ಮೋದಿ ಅವರು ಈ ವರ್ಷ ಏಪ್ರಿಲ್‌ನಲ್ಲಿ ದೀರ್ಘ ಕಾಲದ ಕ್ಯಾನ್ಸರ್‌ನಿಂದ (Cancer) ಬಳಲುತ್ತಿರುವ ಕಾರಣದಿಂದಾಗಿ 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ಮಂಗಳವಾರ ರೇವಣ್ಣ ಬಿಡುಗಡೆ – ಕೋರ್ಟ್‌ನಲ್ಲಿ ವಾದ, ಪ್ರತಿವಾದ ಹೇಗಿತ್ತು? ಜಾಮೀನು ಷರತ್ತು ಏನು?
- Advertisement
- Advertisement
ರಾಜ್ಯಸಭಾ ಮಾಜಿ ಸಂಸದರಾಗಿದ್ದ ಸುಶೀಲ್ ಮೋದಿ ಪಾರ್ಥಿವ ಶರೀರವನ್ನು ಮಂಗಳವಾರ (ಮೇ 14) ಪಾಟ್ನಾದ ರಾಜೇಂದ್ರ ನಗರ ಪ್ರದೇಶದಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು ಮತ್ತು ಅಂತಿಮ ದರ್ಶನದ ಬಳಿಕ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು. ಇದನ್ನೂ ಓದಿ: ಮುಂಬೈನಲ್ಲಿ ಬಿರುಗಾಳಿಗೆ ಉರುಳಿತು ಬೃಹತ್ ಬಿಲ್ ಬೋರ್ಡ್ – 8 ಸಾವು, 59 ಮಂದಿಗೆ ಗಾಯ
ಸುಶೀಲ್ ಕುಮಾರ್ ಮೋದಿ ಅವರ ನಿಧನಕ್ಕೆ ಬಿಹಾರದ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಸೇರಿದಂತೆ ಹಲವಾರು ಬಿಜೆಪಿ ನಾಯಕರು ದುಃಖ ವ್ಯಕ್ತಪಡಿಸಿದ್ದು, ಸುಶೀಲ್ ಕುಮಾರ್ ಮೋದಿಯವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಶಂಕರಾಚಾರ್ಯರು ಸಂಚರಿಸಿದ್ದ ರಸ್ತೆಯಲ್ಲಿ ಮೋದಿ 6 ಕಿ.ಮೀ ರೋಡ್ ಶೋ – ಮಂಗಳವಾರವೇ ನಾಮಪತ್ರ ಸಲ್ಲಿಕೆ ಯಾಕೆ?