ರಾಯಚೂರು: ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದರಿಂದ ರಾಯಚೂರು ಗ್ರಾಮೀಣ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ಅವರು ಮಂಗಳವಾರ ಗಳಗಳನೆ ಕಣ್ಣಿರಿಟ್ಟಿದ್ದಾರೆ.
ನಗರದ ಹೊರವಲಯದ ಹರ್ಷಿತಾ ಗಾರ್ಡನ್ನಲ್ಲಿ ಆಯೋಜಿಸಿದ್ದ ಆತ್ಮಾವಲೋಕನ ಸಭೆಯಲ್ಲಿ ಭಾವುಕರಾಗಿ ಮಾತನಾಡಿದ ಅವರು, ಕಳೆದ ಬಾರಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕ್ಷೇತ್ರದಲ್ಲಿಯೇ ಅಷ್ಟೊಂದು ಅಭಿವೃದ್ಧಿ ಕೆಲಸಗಳಾಗಿಲ್ಲ. ನನ್ನ ಹಣೆಬರಹದಲ್ಲಿ ಸೋಲು ಬರೆದಿದೆ ಅನಿಸುತ್ತದೆ, ಯಾರನ್ನೂ ದೋಷಿಸಿದರೂ ಪ್ರಯೋಜನವಿಲ್ಲ ಎಂದು ಹೇಳಿದರು.
Advertisement
Advertisement
ಮತದಾರರಿಗೆ ಅಭಿನಂದನೆ ಸಲ್ಲಿಸಲು ಸಭೆ ಆಯೋಜಿಸಲಾಗಿದೆ. ನಾನೇನು ಸನ್ಯಾಸಿಯಲ್ಲ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಅವಕಾಶ ಸಿಕ್ಕರೆ ಗೆಲ್ಲುವ ಭರವಸೆ ನನಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.