ಹಾವೇರಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಕ್ಷೇತ್ರದ ಮಾಜಿ ಸಂಸದ ಮಂಜುನಾಥ್ ಕುನ್ನೂರು (Manjunath Kunnur) ಹಾಗೂ ಅವರ ಪುತ್ರ ರಾಜು ಕುನ್ನೂರು (Raju Kunnur) ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿ ಬಿಜೆಪಿ (BJP) ಪಕ್ಷಕ್ಕೆ ಶಾಕ್ ನೀಡಿದ್ದಾರೆ.
ಸೋಮವಾರ ಅಧಿಕೃತವಾಗಿ ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ (Bengaluru) ಕಾಂಗ್ರೆಸ್ (Congress) ಸೇರ್ಪಡೆಗೆ ಮುಂದಾಗಿದ್ದಾರೆ. ಮಂಜುನಾಥ್ ಕುನ್ನೂರು ಶಿಗ್ಗಾಂವಿ (Shiggavi) ಕ್ಷೇತ್ರದಿಂದ ಎರಡು ಭಾರಿ ಶಾಸಕರಾಗಿದ್ದರು. 1989-1994 ಮತ್ತು 1994-1999 ರ ಅವಧಿಯಲ್ಲಿ ಶಾಸಕರಾಗಿದ್ದು, 2004ರಲ್ಲಿ ಧಾರವಾಡ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿ ಆಯ್ಕೆಯಾದರು. ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ್ ಇಂದು ರಾಜೀನಾಮೆ
2008ರಲ್ಲಿ ಕಾಂಗ್ರೆಸ್‌ನಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಹ್ಲಾದ್ ಜೋಶಿ ವಿರುದ್ಧ ಸೋತಿದ್ದ ಅವರು, ಮತ್ತೆ 2018ರಲ್ಲಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಮಾತುಕತೆ ನಡೆಸಿ ಬಿಜೆಪಿ ಸೇರಿದ್ದರು. ಪಂಚಮಸಾಲಿ ಮುಖಂಡರಾಗಿರುವ ಕುನ್ನೂರು ಮತ್ತೆ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಮೂಲಕ ಚುನಾವಣೆಯ ಸಮಯದಲ್ಲಿ ಬಸವರಾಜ್ ಬೊಮ್ಮಾಯಿಯವರಿಗೆ ಶಾಕ್ ನೀಡಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ಸಂಚಾರದ ವೇಳೆ ಭದ್ರತಾ ವೈಫಲ್ಯ – ವಾಹನಗಳನ್ನು ಬೆನ್ನಟ್ಟಿದ ಬೈಕರ್ಸ್