Bengaluru CityDistrictsKarnatakaLatestLeading NewsMain Post

ದೆಹಲಿಗೆ ಹೊರಟ ಬಿಎಸ್‌ವೈ – ಇಂದು ಸಂಜೆ ಮೋದಿ ಭೇಟಿ

ಬೆಂಗಳೂರು: ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕಿದ ಬಳಿಕ ಮೊದಲ ಬಾರಿಗೆ ಮಾಜಿ ಸಿಎಂ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಇಂದು ಬಿಎಸ್‌ವೈ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.

ದೆಹಲಿ ಪ್ರಯಾಣಕ್ಕೆ ಮೊದಲು ಕಾವೇರಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ನಾಳೆ ದೆಹಲಿಯಲ್ಲಿ ಇರುತ್ತೇನೆ. ಇವತ್ತು ಸಂಜೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುತ್ತಿದ್ದೇನೆ. ನಂತರ ಅಮಿತ್ ಶಾ ಹಾಗೂ ಜೆ.ಪಿ. ನಡ್ದಾ ಅವರನ್ನು ಭೇಟಿಯಾಗುತ್ತಿದ್ದೇನೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಶಿವಮೊಗ್ಗ SDPI ಕಚೇರಿ ಮೇಲೆ ಪೊಲೀಸರ ದಾಳಿ – ಮಹತ್ವದ ದಾಖಲೆ ವಶಕ್ಕೆ

ನಾಳೆ ಸಂಜೆ ವಾಪಸ್ ಬರಬೇಕು ಎಂದುಕೊಂಡಿದ್ದೇನೆ. ರಾಜನಾಥ್ ಸಿಂಗ್ ಸೇರಿದಂತೆ ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ. ಮುಂದೆ ಏನು ಕೆಲಸ ಮಾಡಬೇಕು ಎಂದು ಅವರ ಸಲಹೆ ಕೇಳುವುದು ನನ್ನ ಕರ್ತವ್ಯ ಎಂದು ತಿಳಿಸಿದರು.

ಈ ಭೇಟಿಯ ವೇಳೆ ಆರ್‌ಎಸ್‌ಎಸ್‌ನ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರನ್ನು ಭೇಟಿಯಾಗಲು ಪ್ರಯತ್ನಪಡುತ್ತೇನೆ ಎಂದು ಹೇಳಿದರು.

Live Tv

Leave a Reply

Your email address will not be published.

Back to top button