ಮೈಸೂರು: ಮಡಿಕೇರಿ ಚಲೋ ಕೈ ಬಿಟ್ಟ ಕಾಂಗ್ರೆಸ್ ನಿಲುವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ.
ನಗರದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಬಿಎಸ್‍ವೈ, ಶಾಂತಿ ವಾತಾವರಣ ಇದ್ದಾಗ ಎಷ್ಟು ಜನರನ್ನಾದರೂ ಸೇರಿಸಿ. ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಈ ನಿರ್ಧಾರ ಸ್ವಾಗತಾರ್ಹ. ಬಿಜೆಪಿ ಕಾರ್ಯಕರ್ತರು ಕೂಡ ಯಾವುದೇ ಕಾರ್ಯಕ್ರಮ ಮಾಡಬಾರದು ಎಂದು ಅವರು ಹೇಳಿದರು.
Advertisement
Advertisement
ಸಿದ್ದರಾಮಯ್ಯ ಮೊಟ್ಟೆ ಎಸೆತ ಪ್ರಕರಣವನ್ನು ನೆಪ ಮಾಡಿಕೊಂಡು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಮೊಟ್ಟೆಯನ್ನು ಯಾರೇ ಎಸೆದಿದ್ದರೂ ಅದು ತಪ್ಪೇ. ಆದರೆ ಅದನ್ನೇ ನೆಪ ಮಾಡಿಕೊಂಡು ಪಾದಯಾತ್ರೆ ಹಮ್ಮಿಕೊಂಡಿದ್ದು ಕೂಡ ತಪ್ಪು ಎಂದರು. ಇದನ್ನೂ ಓದಿ: ಆಗಸ್ಟ್ 26ಕ್ಕೆ ಮಡಿಕೇರಿ ಚಲೋ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
Advertisement
Advertisement
ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದು ಸಿದ್ದರಾಮಯ್ಯ ಟೀಕಿಸುತ್ತಿರುವುದು ಸರಿಯಲ್ಲ. ಯಾರಿಗೆ ಧರ್ಮ, ದೇಶದ ಪರಿಕಲ್ಪನೆ ಇರುವುದಿಲ್ಲವೋ ಅಂತಹವರು ಈ ರೀತಿ ಬೇಜವಾಬ್ದಾರಿತನದಿಂದ ಮಾತಾಡ್ತಾರೆ. ಸಾವರ್ಕರ್ ಕುರಿತು ಸಿದ್ದರಾಮಯ್ಯ ನೀಡುತ್ತಿರುವ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಇದೇ ರೀತಿ ಮುಂದುವರಿದರೆ ರಾಜ್ಯದ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಆ ಕಾಲ ಬಹಳ ದೂರವಿಲ್ಲ. ಸಾವರ್ಕರ್ ಅವರ ದೇಶಭಕ್ತಿಯನ್ನು ಜನರಿಗೆ ಸಾರುವ ಸಲುವಾಗಿ ರಥಯಾತ್ರೆ ನಡೆಸುತ್ತಿದ್ದೇವೆ. ಹೆಚ್ಚಿನ ಜನರನ್ನು ಸೇರಿಸದೇ ಸಾವರ್ಕರ್ ರಥಯಾತ್ರೆ ನಡೆಸುತ್ತೇವೆ. ಶಾಂತಿಯುತವಾಗಿ ರಥಯಾತ್ರೆ ನಡೆಸುತ್ತೇವೆ ಎಂದರು.