– ಸಿದ್ದರಾಮಯ್ಯ ವಿರುದ್ಧ ಆಕ್ರೋಶ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
ಪ್ರಧಾನಿ ಮೋದಿ ಭೇಟಿ ಆಗಿದ್ದ ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಸಿದ್ದರಾಮಯ್ಯ ಅವರು ರಾಜಕೀಯ ಭೇಟಿ ಎಂದು ಪ್ರತಿಕ್ರಿಯೆ ನೀಡಿದ್ದರು. ಇದರಿಂದ ಸಿಟ್ಟಿಗೆದ್ದ ಹೆಚ್.ಡಿಕೆ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
Advertisement
ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ? ಸಂಸತ್ ಕಲಾಪಕ್ಕೆ ತೆರಳಿದ್ದ ಹೆಚ್.ಡಿ.ದೇವೇಗೌಡರು ಅಲ್ಲಿಯೇ ಇದ್ದ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಆ ಭೇಟಿ ರಾಜಕೀಯ, ಸಂಕುಚಿತತೆಯ ಎಲ್ಲೆ ಮೀರಿದ್ದು ಎನ್ನುವುದನ್ನು ಆ ಇಬ್ಬರು ನಾಯಕರ ಭೇಟಿಯ ಚಿತ್ರಗಳೇ ಹೇಳುತ್ತವೆ. 1/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 3, 2021
Advertisement
ಸರಣಿ ಟ್ವೀಟ್ನಲ್ಲೇನಿದೆ..?
ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ? ಸಂಸತ್ ಕಲಾಪಕ್ಕೆ ತೆರಳಿದ್ದ ಹೆಚ್.ಡಿ.ದೇವೇಗೌಡರು ಅಲ್ಲಿಯೇ ಇದ್ದ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಆ ಭೇಟಿ ರಾಜಕೀಯ, ಸಂಕುಚಿತತೆಯ ಎಲ್ಲೆ ಮೀರಿದ್ದು ಎನ್ನುವುದನ್ನು ಆ ಇಬ್ಬರು ನಾಯಕರ ಭೇಟಿಯ ಚಿತ್ರಗಳೇ ಹೇಳುತ್ತವೆ.
Advertisement
ಅಸೂಯೆ, ದ್ವೇಷ, ಅಸಹನೆ, ಸರ್ವಾಧಿಕಾರಿ ಮನೋಭಾವದ ʼಸಿದ್ದಕಲೆʼಯ ನಿಪುಣನಿಗೆ ರಾಜಕೀಯದಲ್ಲಿ ವಿರಳಾತಿ ವಿರಳವಾಗಿ ಕಾಣುವ ಇಂಥ ಭೇಟಿಗಳನ್ನು ಅರಗಿಸಿಕೊಳ್ಳುವುದು ಹೇಗೆ ತಾನೇ ಸಾಧ್ಯ? 2/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 3, 2021
Advertisement
ಅಸೂಯೆ, ದ್ವೇಷ, ಅಸಹನೆ, ಸರ್ವಾಧಿಕಾರಿ ಮನೋಭಾವದ ಸಿದ್ದಕಲೆಯ ನಿಪುಣನಿಗೆ ರಾಜಕೀಯದಲ್ಲಿ ವಿರಳಾತಿ ವಿರಳವಾಗಿ ಕಾಣುವ ಇಂಥ ಭೇಟಿಗಳನ್ನು ಅರಗಿಸಿಕೊಳ್ಳುವುದು ಹೇಗೆ ತಾನೇ ಸಾಧ್ಯ?
ʼರಾಜಕೀಯ ರಕ್ಕಸತನʼಕ್ಕೆ ಅವರು ರಾಜಾಧಿರಾಜ. ʼರಾಜಕೀಯ ಆಶ್ರಯʼ ನೀಡಿದ ಕಾಂಗ್ರೆಸ್ ಪಕ್ಷವನ್ನೇ ಹೆಬ್ಬಾವಿನಂತೆ ನುಂಗಲು ಹೊರಟ ʼಸಿದ್ದಸೂತ್ರಧಾರʼನಿಗೆ ರಾಜಕೀಯ ಬದುಕು ಕೊಟ್ಟು ಬೆಳೆಸಿದ ಜೆಡಿಎಸ್ ಪಕ್ಷವನ್ನು ಮುಳುಗಿಸಿಬಿಡುವ ಹಗಲುಕನಸು ಬೇರೆ ಇದೆ.3/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 3, 2021
‘ರಾಜಕೀಯ ರಕ್ಕಸತನ’ಕ್ಕೆ ಅವರು ರಾಜಾಧಿರಾಜ. ‘ರಾಜಕೀಯ ಆಶ್ರಯ’ ನೀಡಿದ ಕಾಂಗ್ರೆಸ್ ಪಕ್ಷವನ್ನೇ ಹೆಬ್ಬಾವಿನಂತೆ ನುಂಗಲು ಹೊರಟ ‘ಸಿದ್ದಸೂತ್ರಧಾರ’ನಿಗೆ ರಾಜಕೀಯ ಬದುಕು ಕೊಟ್ಟು ಬೆಳೆಸಿದ ಜೆಡಿಎಸ್ ಪಕ್ಷವನ್ನು ಮುಳುಗಿಸಿಬಿಡುವ ಹಗಲುಕನಸು ಬೇರೆ ಇದೆ.
ದೇವೇಗೌಡರು ಅವಕಾಶವಾದಿ ರಾಜಕಾರಣಿ ಎನ್ನುವ ಆ ನಾಲಗೆ, ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎನ್ನುವ ಆ ನಾಲಗೆಯ ಮೇಲೆ ʼಪಕ್ಷನಿಷ್ಠೆʼ ಎನ್ನುವ ಪದ ಎಂದಾದರೂ ಬಂದಿದೆಯಾ? ಅದಕ್ಕೆ ಆ ಪದ ʼಪರಮ ಅಪಥ್ಯʼ ಎನ್ನುವುದು ಇಡೀ ರಾಜ್ಯದ ಜನರಿಗೆ ಗೊತ್ತು.4/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 3, 2021
ದೇವೇಗೌಡರು ಅವಕಾಶವಾದಿ ರಾಜಕಾರಣಿ ಎನ್ನುವ ಆ ನಾಲಗೆ, ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎನ್ನುವ ಆ ನಾಲಗೆಯ ಮೇಲೆ ‘ಪಕ್ಷನಿಷ್ಠೆ’ ಎನ್ನುವ ಪದ ಎಂದಾದರೂ ಬಂದಿದೆಯಾ? ಅದಕ್ಕೆ ಆ ಪದ ‘ಪರಮ ಅಪಥ್ಯ’ ಎನ್ನುವುದು ಇಡೀ ರಾಜ್ಯದ ಜನರಿಗೆ ಗೊತ್ತು.
ನನಗಿಲ್ಲದಿದ್ದರೆ ಯಾರಿಗೂ ಬೇಡ ಎನ್ನುವ ಸ್ವಾರ್ಥ ಮನೋಭಾವದಿಂದ ಸ್ವಪಕ್ಷವೂ ಇದ್ದ ಮೈತ್ರಿ ಸರಕಾರವನ್ನೇ ʼಸ್ವಾಹಾʼ ಮಾಡಿ ಆಪರೇಷನ್ ಕಮಲದ ಕೆಸರಿನಲ್ಲಿ ವಿಕೃತವಾಗಿ ಹೊರಳಾಡಿದವರು ಯಾರು ಎನ್ನುವುದು ಅವರ ಸ್ವಪಕ್ಷೀಯರಿಗೇ ಚೆನ್ನಾಗಿ ಗೊತ್ತು.5/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 3, 2021
ನನಗಿಲ್ಲದಿದ್ದರೆ ಯಾರಿಗೂ ಬೇಡ ಎನ್ನುವ ಸ್ವಾರ್ಥ ಮನೋಭಾವದಿಂದ ಸ್ವಪಕ್ಷವೂ ಇದ್ದ ಮೈತ್ರಿ ಸರಕಾರವನ್ನೇ ‘ಸ್ವಾಹಾ’ ಮಾಡಿ ಆಪರೇಷನ್ ಕಮಲದ ಕೆಸರಿನಲ್ಲಿ ವಿಕೃತವಾಗಿ ಹೊರಳಾಡಿದವರು ಯಾರು ಎನ್ನುವುದು ಅವರ ಸ್ವಪಕ್ಷೀಯರಿಗೇ ಚೆನ್ನಾಗಿ ಗೊತ್ತು. ಇದನ್ನೂ ಓದಿ: ಪ್ರಧಾನಿಯನ್ನು ಭೇಟಿ ಮಾಡಿದ ತಕ್ಷಣ ಬಿಜೆಪಿಗೆ ಹೋಗುತ್ತೇವೆ ಎಂದಲ್ಲ: ಎಚ್.ಡಿ.ದೇವೇಗೌಡ
ನಾಯಕರಿಗೆ ಗತಿ ಇಲ್ಲ, ಅಭ್ಯರ್ಥಿಗಳಿಗಂತೂ ದಟ್ಟ ದಾರಿದ್ರ್ಯ. ಇನ್ನು, ಪಕ್ಷದ ಬಗ್ಗೆ ಹೇಳುವುದೇ ಬೇಡ. ಅಧ್ಯಕ್ಷರಿಗೊಂದು ಕಾಂಗ್ರೆಸ್, ಪ್ರತಿಪಕ್ಷ ನಾಯಕರಿಗೊಂದು ಕಾಂಗ್ರೆಸ್. ಅಷ್ಟೇ ಅಲ್ಲ; ಜಿಲ್ಲೆಗಳಲ್ಲಿ ಎರಡೆರಡು ಕಾಂಗ್ರೆಸ್ʼಗಳು!! ʼಸಿದ್ದಸೂತ್ರಧಾರʼನಿಗೆ ಇದೆಲ್ಲ ಗೊತ್ತಿಲ್ಲವೇ? 6/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 3, 2021
ನಾಯಕರಿಗೆ ಗತಿ ಇಲ್ಲ, ಅಭ್ಯರ್ಥಿಗಳಿಗಂತೂ ದಟ್ಟ ದಾರಿದ್ರ್ಯ. ಇನ್ನು, ಪಕ್ಷದ ಬಗ್ಗೆ ಹೇಳುವುದೇ ಬೇಡ. ಅಧ್ಯಕ್ಷರಿಗೊಂದು ಕಾಂಗ್ರೆಸ್, ಪ್ರತಿಪಕ್ಷ ನಾಯಕರಿಗೊಂದು ಕಾಂಗ್ರೆಸ್. ಅಷ್ಟೇ ಅಲ್ಲ; ಜಿಲ್ಲೆಗಳಲ್ಲಿ ಎರಡೆರಡು ಕಾಂಗ್ರೆಸ್ಗಳು!! ‘ಸಿದ್ದಸೂತ್ರಧಾರ’ನಿಗೆ ಇದೆಲ್ಲ ಗೊತ್ತಿಲ್ಲವೇ?
ಬಾಯಲ್ಲಿ ಜಾತ್ಯತೀತೆಯ ಜಪ ಮಾಡುತ್ತಲೇ ʼಸಂದೇಶ ಸನ್ನಿಧಿʼಯಲ್ಲಿ ʼಸಿದ್ಧಸೂತ್ರʼ ಹೆಣೆದ ʼರಕ್ಕಸ ರಾಜಕಾರಣʼಕ್ಕೆ ಕೊನೆಗಾಲ ಬಂದಿದೆ. ಆ ದಿನವೂ ಹತ್ತಿರದಲ್ಲೇ ಇದೆ.7/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 3, 2021
ಬಾಯಲ್ಲಿ ಜಾತ್ಯತೀತೆಯ ಜಪ ಮಾಡುತ್ತಲೇ ‘ಸಂದೇಶ ಸನ್ನಿಧಿ’ಯಲ್ಲಿ ‘ಸಿದ್ಧಸೂತ್ರ’ ‘ಹೆಣೆದ ರಕ್ಕಸ ರಾಜಕಾರಣ’ಕ್ಕೆ ಕೊನೆಗಾಲ ಬಂದಿದೆ. ಆ ದಿನವೂ ಹತ್ತಿರದಲ್ಲೇ ಇದೆ.