ಮೈಸೂರು: ಪುಟ್ಕೋಸಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ಸರ್ಕಾರ ತೆಗೆದ ಮಹಾನ್ ನಾಯಕ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನವರಾತ್ರಿ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಟುಂಬ ಇಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಪೊಜೆ ಸಲ್ಲಿಸಿದೆ. ಈ ವೇಳೆ ಕುಮಾರಸ್ವಾಮಿಗೆ ಸ್ಥಳೀಯ ಮುಖಂಡರು ಸಾಥ್ ನೀಡಿದರು. ದೇವಾಲಯ ಭೇಟಿ ಬಳಿಕ ಹೆಚ್‍ಡಿಕೆ ಕಾರ್ಯಕರ್ತರ ಜೊತೆ ಸಭೆ ನಡೆಸಿದರು. ಇದನ್ನೂ ಓದಿ: ರಾಷ್ಟ್ರರಾಜಕಾರಣಕ್ಕೆ ಸಿದ್ದರಾಮಯ್ಯ ಹೋಗ್ತಾರಾ?- ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ
ಈ ವೇಳೆ ಮಾತನಾಡಿದ ಅವರು, ಪುಟ್ಕೋಸಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕಾಗಿ ಸರ್ಕಾರ ತೆಗೆದ ಮಹಾನ್ ನಾಯಕ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ನೀವು ನನ್ನ ಬಗ್ಗೆ ಮಾತನಾಡಬೇಡಿ. ಗೂಟದ ಕಾರಿಗಾಗಿ ನಿಮ್ಮ ಪಕ್ಷದ 23 ಜನ ನಿಮ್ಮ ಪಕ್ಷದ ಸಚಿವರನ್ನು ಬೀದಿಗೆ ತಂದವರು ನೀವು. ಯಡಿಯೂರಪ್ಪ ಸರ್ಕಾರ ಬರಲು ನಿಮ್ಮ ಪಾತ್ರ ಎಷ್ಟು ಇತ್ತು ಅನ್ನೋದು ನನಗೆ ಗೊತ್ತಿದೆ. ಅಧಿಕಾರಕ್ಕಾಗಿ ನೀವು ಎಷ್ಟೆಟ್ಟು ಕುತಂತ್ರ ಮಾಡುತ್ತೀರಾ ಅನ್ನೋದು ನನಗೆ ಚೆನ್ನಾಗಿ ಗೊತ್ತಿದೆ ಎಂದು ಕಿಡಿಕಾರಿದರು.