ಹುಬ್ಬಳ್ಳಿ: ಹಿಜಬ್ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ನಾನು ಮಹತ್ವ ನೀಡಲ್ಲ. ಅವರು ಕನ್ನಡ ಪಂಡಿತರು ಆದರೆ ಸದನದಲ್ಲಿ ಹಿಜಬ್ ವಿಚಾರವಾಗಿ ಅವರು ಮಾತನಾಡಲಿಲ್ಲ ಅಂತ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವ್ಯಂಗವಾಡಿದ್ದಾರೆ.
Advertisement
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಹೆಚ್‍ಡಿಕೆ, ಹಿಜಾಬ್ ವಿಚಾರದಲ್ಲಿ ಸ್ವಾಮೀಜಿಗಳನ್ನ ಎಳೆದು ತರೋ ಅವಶ್ಯಕತೆ ಇರಲಿಲ್ಲ. ಅವರ ಹೇಳಿಕೆಯನ್ನ ರಾಜಕೀಯವಾಗಿ ದುರ್ಬಳಕೆ ಮಾಡೋ ಅವಶ್ಯಕತೆ ಇಲ್ಲ. ಅವರ ಮಾತು ಅವರು ಬೆಳೆಬಂದ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದರು. ಇದನ್ನೂ ಓದಿ: ಮುಂಬರುವ ಚುನಾವಣೆಯೇ ನನ್ನ ಕೊನೆಯ ಎಲೆಕ್ಷನ್: ಸಿದ್ದರಾಮಯ್ಯ
Advertisement
Advertisement
ಕಾಂಗ್ರೆಸ್ ನವರ ಮಹದಾಯಿಗಾಗಿ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಇಲ್ಲಿನ ರೈತ ಹೋರಾಟಗಾರರು, ಮಹಿಳೆಯರ ಮೇಲೆ ಹಲ್ಲೆ ನಡೆಸಲಾಯಿತು. ರೈತರ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಈಗ ಯಾವ ನೈತಿಕತೆ ಇಟ್ಕೊಂಡು ಪಾದಯಾತ್ರೆ ಮಾಡ್ತಾರೆಂದು ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದರು.
Advertisement
ನೀರಿನ ವಿಚಾರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯಕ್ಕೆ ಅನ್ಯಾಯ ಮಾಡುತ್ತಿವೆ. ಇದಕ್ಕಾಗಿ ನಮ್ಮ ಪಕ್ಷದಿಂದ ಜನತಾ ಜಲಧಾರೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ಮುಖಾಂತರ ಜೆಡಿಎಸ್ ರಾಜ್ಯವ್ಯಾಪ್ತಿ ಜಾಗೃತಿ ಮೂಡಿಸುವ ಸಂಕಲ್ಪ ಹೊಂದಿದೆ. ಅಧಿವೇಶನ ನಂತರ ಈ ಕಾರ್ಯಕ್ರಮ ಆರಂಭವಾಗುತ್ತದೆ ಎಂದರು. ಇದನ್ನೂ ಓದಿ: ನಮ್ಮ-ನಿಮ್ಮೆಲ್ಲರ ರಕ್ತ ಒಂದೇ ಬಣ್ಣದ್ದು, ಮೂರು ದಿನಗಳ ಬಾಳಲ್ಲಿ ಏಕೆ ಕಿತ್ತಾಟ?: ಹ್ಯಾರೀಸ್