ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಧರಂ ಸಿಂಗ್(80) ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಧರಂ ಸಿಂಗ್ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಗುರುವಾರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಕಲಬುರಗಿ ಜಿಲ್ಲೆಯ, ಜೇವರ್ಗಿ ತಾಲೂಕಿನ, ನೇಲೋಗಿ ಗ್ರಾಮದಲ್ಲಿ 1936 ರಲ್ಲಿ ಜನಿಸಿದ ಧರಂ ಸಿಂಗ್, ಹೈದರಾಬಾದ್ ನ ಓಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂಎ ಹಾಗೂ ಎಲ್‍ಎಲ್‍ಬಿ ಪದವಿಗಳನ್ನು ಪಡೆದಿದ್ದಾರೆ. ವಕೀಲರಾಗಿ ಸ್ವಲ್ಪ ಕಾಲ ಕಾರ್ಯ ನಿರ್ವಹಿಸಿದ ಮೇಲೆ 60 ರ ದಶಕದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರಾದರು.
Advertisement
ಜೇವರ್ಗಿ ವಿಧಾನಸಭಾ ಕ್ಷೇತ್ರದಿಂದ ಸತತ 7 ಬಾರಿ ಚುನಾಯಿತರಾಗಿದ್ದ ಇವರು 1980 ರಲ್ಲಿ ಗುಲ್ಬರ್ಗ ಕ್ಷೇತ್ರದಿಂದ ಲೋಕಸಭೆಗೆ ಸಹ ಚುನಾಯಿತರಾಗಿದ್ದರು.
Advertisement
2004ರ ಮೇ 28 ರಿಂದ ಜನವರಿ 2016ರವರೆಗೆ ಧರಂ ಸಿಂಗ್ ಮುಖ್ಯಮಂತ್ರಿಯಾಗಿ ಕರ್ನಾಟಕವನ್ನು ಮುನ್ನಡೆಸಿದ್ದರು. ಮುಖ್ಯಮಂತ್ರಿಯಾಗುವ ಮೊದಲು ಕರ್ನಾಟಕ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು.
Advertisement
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಲೋಕೋಪಯೊಗಿ ಖಾತೆಯನ್ನು ನಿರ್ವಹಿಸಿದ್ದರು. ಇದಕ್ಕಿಂತ ಮೊದಲು ಗೃಹ ಖಾತೆ, ಸಮಾಜ ಸುಧಾರಣಾ ಖಾತೆ, ಅಬಕಾರಿ ಖಾತೆ ಮೊದಲಾದ ಖಾತೆಗಳನ್ನು ನಿರ್ವಹಿಸಿದ್ದರು. ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ) ಯ ಅಧ್ಯಕ್ಷತೆಯನ್ನು ಸಹ ವಹಿಸಿದ್ದರು.