ಮಹಾರಾಷ್ಟ್ರ ಮಾಜಿ ಸಿಎಂ ಮನೋಹರ್ ಜೋಶಿ ನಿಧನ

Public TV
1 Min Read
MANOHAR JOSHI

ಮುಂಬೈ: ಶಿವಸೇನೆ ನಾಯಕ, ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ (Manohar Joshi) ಶುಕ್ರವಾರ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾದರು.

ಹೃದಯಾಘಾತದಿಂದ ಬಳಲುತ್ತಿದ್ದ ಅವರನ್ನು ಫೆಬ್ರವರಿ 21ರಂದು ಜೋಶಿ ಅವರನ್ನು ನಗರದ ಪಿಡಿ ಹಿಂದೂಜಾ ಆಸ್ಪತ್ರೆಯ ಐಸಿಯುಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು. ಕಳೆದ ವರ್ಷ ಮೇ ತಿಂಗಳಲ್ಲಿ ಮಿದುಳು ರಕ್ತಸ್ರಾವದಿಂದ ಬಳಲುತ್ತಿದ್ದ ಜೋಈಯವರನ್ನು ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಕ್ರೀಡಾಂಗಣದಲ್ಲಿ ಸಾರ್ವಜನಿಕವಾಗಿ ಇಬ್ಬರ ತಲೆಗೆ 15 ಬಾರಿ ಗುಂಡಿಟ್ಟು ಮರಣದಂಡನೆ

ಜೋಶಿ ಅವರು 1995 ರಿಂದ 1999 ರವರೆಗೆ ಮುಖ್ಯಮಂತ್ರಿಯಾಗಿದ್ದರು ಮತ್ತು ಅವಿಭಜಿತ ಶಿವಸೇನೆಯಿಂದ ರಾಜ್ಯದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ನಾಯಕರಾಗಿದ್ದರು. ಸಂಸತ್ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ವಾಜಪೇಯಿ ಸರ್ಕಾರ ಅಧಿಕಾರದಲ್ಲಿದ್ದಾಗ 2002 ರಿಂದ 2004 ರವರೆಗೆ ಲೋಕಸಭೆಯ ಸ್ಪೀಕರ್ ಆಗಿದ್ದರು.

Share This Article