ಬೆಂಗಳೂರು: ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಕೆದಾಟು ಪಾದಯಾತ್ರೆಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಇಂದು 7 ಕಿ.ಮೀ ಪಾದಯಾತ್ರೆಯಿಂದ ಬಳಲಿರುವ ಸಿದ್ದರಾಮಯ್ಯಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಹೀಗಾಗಿ ರಾಮನಗರದ ಕಾಂಗ್ರೆಸ್ ನಾಯಕರೊಬ್ಬರ ಮನೆಗೆ ವಿಶ್ರಾಂತಿಗೆ ತರಳಿದ್ದಾರೆ. ನಂತರ ತೀವ್ರ ಬ್ಯಾಕ್ ಪೈನ್ ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಾಸ್ ಹೊರಟಿದ್ದಾರೆ. ಇದನ್ನೂ ಓದಿ: ಮೈ ಕೈ ನೋವು, ಸುಸ್ತಿನಿಂದ ಬಳಲುತ್ತಿರುವ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್
Advertisement
Advertisement
ಇತ್ತ ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್ ತರಾಟೆ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೋರ್ಟ್ ತೀರ್ಪನ್ನ ನಾವು ಪಾಲಿಸುತ್ತೇವೆ. ಕೋರ್ಟ್ 14 ರಂದು ಏನು ಅನ್ನೋ ಸೂಚನೆ ಕೊಡುತ್ತೆ. ಕೂರ್ಟ್ ಸೂಚನೆಯಂತೆ ನಾವು ನಡೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಪಾದಯಾತ್ರೆಗೆ ಹೈಕೋರ್ಟ್ ಕೆಂಡಾಮಂಡಲ – ಕೈ ಮುಗಿದು ಮುಖದ ಮೇಲೆ ಕೈಯಿಟ್ಟ ಡಿಕೆಶಿ
Advertisement
Advertisement
ಮೇಕೆದಾಟು ಪಾದಯಾತ್ರೆಗೆ ಜ.9ರಂದು ಚಾಲನೆ ಸಿಕ್ಕಿದೆ. ಪಾದಯಾತ್ರೆ ಮೂರು ದಿನ ಪೂರೈಸಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆ ವಿಚಾರವಾಗಿ ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಯಾರ ಅನುಮತಿ ಪಡೆದು ಪಾದಯಾತ್ರೆ ನಡೆಸುತ್ತಿದ್ದೀರಿ ಎಂದು ಕೋರ್ಟ್ ಪ್ರಶ್ನಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.