ಮೈಸೂರು: ಪ್ರಧಾನಿ, ಮುಖ್ಯಮಂತ್ರಿ ಸ್ಥಾನ ಇರೋದೇ ಜನ ಸೇವೆಗೆ. ನರೇಂದ್ರ ಮೋದಿಗೆ ಈಗ ಅದು ಜ್ಞಾನೋದಯವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಧಿಕಾರ ಅಲ್ಲ ಜನ ಸೇವೆ ಮುಖ್ಯ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಟಾಂಗ್ ನೀಡಿದ ಸಿದ್ದರಾಮಯ್ಯ, ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗುವುದು ಜನ ಸೇವೆಗಾಗಿ. ಅದರಲ್ಲಿ ಹೊಸದು ಏನಿದೆ? ಪ್ರಧಾನಮಂತ್ರಿ ಹುದ್ದೆ ಎನ್ನುವುದು ಜನಸೇವೆಗಾಗಿ ಎಂಬುದು ಅವರಿಗೆ ಈಗ ಜ್ಞಾನೋದಯವಾಗಿದೆ. ರಾಜಕೀಯವೇ ಜನಸೇವೆ- ಅದು ಈಗ ಪ್ರಧಾನಮಂತ್ರಿಗೆ ಅರಿವಾಗಿದೆ ಎಂದರು. ಇದನ್ನೂ ಓದಿ: ನಾನು ಅಧಿಕಾರ ಬಯಸಿಲ್ಲ, ಜನ ಸೇವೆಯೇ ಗುರಿ: ಮೋದಿ
Advertisement
Advertisement
ಇದೇ ವೇಳೆ ಕೊರೊನಾ ಮೂರನೇ ಅಲೆಯನ್ನು ಸರ್ಕಾರ ನಿರ್ಲಕ್ಷಿಸಬಾರದು. ಎರಡನೇ ಅಲೆಯನ್ನು ನಿರ್ಲಕ್ಷಿಸಿದ ಪರಿಣಾಮ ಅನೇಕ ಸಾವುಗಳು ಉಂಟಾದವು ಎಂದು ಸರ್ಕಾರವನ್ನು ಎಚ್ಚರಿಸಿದ್ದಾರೆ. 3ನೇ ಅಲೆ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಅಗತ್ಯ. ರಾಜ್ಯಕ್ಕೂ ಮೂರನೇ ಅಲೆ ಬಾರದಂತೆ ಎಚ್ಚರ ವಹಿಸಬೇಕಾದುದು ಸರ್ಕಾರದ ಕರ್ತವ್ಯ. ಸದ್ಯಕ್ಕೆ ರಾಜ್ಯಕ್ಕೆ ಮೂರನೇ ಅಲೆ ಬಂದಿಲ್ಲ, ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದರು. ಇದನ್ನೂ ಓದಿ: ಮನ್ ಕಿ ಬಾತ್: ಕೋವಿಡ್ ಇನ್ನೂ ಹೋಗಿಲ್ಲ- ದೇಶದ ಜನತೆಗೆ ಪ್ರಧಾನಿ ಮೋದಿ ಎಚ್ಚರಿಕೆ
Advertisement
ವಿಧಾನ ಪರಿಷತ್ ಚುನಾವಣೆಯ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ 15 ಸ್ಥಾನ ಗೆಲ್ಲುತ್ತದೆ. ಜೆಡಿಎಸ್ ಬಿಜೆಪಿಗೆ ಬೆಂಬಲ ಕೊಟ್ಟರೂ, ನಮಗೆ ಏನು ತೊಂದರೆ ಆಗುವುದಿಲ್ಲ. ಮೊದಲಿನಿಂದಲೂ ಅವರದ್ದು ಒಳ ಒಪ್ಪಂದ ನಡೆಯುತ್ತಲೇ ಇದೆ. ಅದರಲ್ಲಿ ಹೊಸತೇನು ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಇಲ್ಲ, ವದಂತಿ ಹಬ್ಬಿಸಿದ್ರೆ ಕಠಿಣ ಕ್ರಮ: ಡಾ. ಕೆ. ಸುಧಾಕರ್