ಬೆಂಗಳೂರು: 2024ಕ್ಕೆ ಕರ್ನಾಟಕ ಇಬ್ಭಾಗವಾಗೋದು ಖಚಿತ ಎಂಬ ಸಚಿವ ಉಮೇಶ್ ಕತ್ತಿ ಮಾತಿಗೆ ಪಕ್ಷಾತೀತವಾಗಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಉಮೇಶ್ ಕತ್ತಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Advertisement
ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಕರ್ನಾಟಕ ಸ್ಥಾಪನೆಯಾಗಿದೆ. ಕರ್ನಾಟಕವನ್ನು ಒಡೆಯುವ ಯೋಚನೆ ಮಾಡುವುದೇ ನಾಡು-ನುಡಿಗೆ ಬಗೆವ ದ್ರೋಹವಾಗುತ್ತದೆ. ಸಚಿವರಾದ ಉಮೇಶ್ ಕತ್ತಿಯವರು ಜವಾಬ್ದಾರಿ ಸ್ಥಾನದಲ್ಲಿರುವವರು. ಪಕ್ಷ ಇಲ್ಲವೆ ಸರ್ಕಾರದ ಮಟ್ಟದಲ್ಲಿ ಅಂತಹ ಚರ್ಚೆ ನಡೆಯದೆ, ರಾಜ್ಯ ಒಡೆಯುವ ಯೋಜನೆಯ ಬಗ್ಗೆ ಮಾತನಾಡಿರಲಾರರು. ಅವರು ಹೇಳಿರುವುದು ಸುಳ್ಳಾಗಿದ್ದರೆ ಇಂತಹ ಬೇಜವಾಬ್ದಾರಿ ಹೇಳಿಕೆಗಾಗಿ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಇದನ್ನೂ ಓದಿ: BBMP 243 ವಾರ್ಡ್ ವಿಂಗಡಣೆಗೆ ಸರ್ಕಾರ ಗ್ರೀನ್ ಸಿಗ್ನಲ್ – 40ಕ್ಕೂ ಹೆಚ್ಚು ವಾರ್ಡ್‌ಗಳ ಸೇರ್ಪಡೆ
Advertisement
Advertisement
ಇದರ ಸತ್ಯಾಸತ್ಯತೆಗಳನ್ನು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ಪಷ್ಟಪಡಿಸಬೇಕು ಸಿದ್ದರಾಮಯ್ಯ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಈ ವಿವಾದದಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಈ ಬಗ್ಗೆ ಕತ್ತಿಯನ್ನೇ ಕೇಳಿ.. ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಸಚಿವ ಅಶ್ವಥ್‍ನಾರಾಯಣ್ ಕೂಡ ಉಮೇಶ್ ಕತ್ತಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಉಮೇಶ್ ಕತ್ತಿ ಪ್ರತ್ಯೇಕ ರಾಜ್ಯ, ಇನ್ನೊಂದು ವಿಚಾರದ ಬಗ್ಗೆ ಹಗುರವಾಗಿ ಮಾತನಾಡುವ ಕೆಲಸ ಮಾಡಬಾರದು. ಅವರ ಹೇಳಿಕೆಯನ್ನು ಆರುವರೆ ಕೋಟಿ ಕನ್ನಡಿಗರ ಪರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.
Advertisement
ಸಿಟಿ ರವಿಯಂತೆ ಕತ್ತಿಗೂ ಕುಡಿಯುವ ಚಟ ಇದೆ ಅನ್ನೋದು ಇದರಿಂದ ಗೊತ್ತಾಗಿದೆ. ಆದರೆ ಅವರು ಹೀಗೆ ಮಾತಾಡೋದು ಸರಿಯಲ್ಲ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ವಾಗ್ದಾಳಿ ನಡೆಸಿದ್ರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾತ್ರ ಚಿಕ್ಕ ರಾಜ್ಯಗಳನ್ನು ಮಾಡೋದು ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದು. ಇಲ್ಲಿ ಪ್ರತ್ಯೇಕ ರಾಜ್ಯ ಅನ್ನೋ ಪ್ರಶ್ನೆ ಇಲ್ಲ.. ಎಂದಿದ್ದಾರೆ.