ಬೆಂಗಳೂರು: ಕೇಂದ್ರದ ಬಜೆಟ್ (Union Budget) ನಿರಾಶದಾಯಕ ಬಜೆಟ್. ಜಾತ್ರೆಯಲ್ಲಿ ಬಾಂಬೆ, ಕೋಲ್ಕಾತ್ತಾ ತೋರಿಸುವ ರೀತಿ ಬಜೆಟ್ ಅಂತಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಲೇವಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಸಿದ್ದರಾಮಯ್ಯ ಕೇಂದ್ರದ ಬಜೆಟ್ ನಿರಾಶದಾಯಕ ಬಜೆಟ್ ಅಂತಾ ಟೀಕಿಸಿದ್ದಾರೆ. ಕೇಂದ್ರದ ಟ್ರಬಲ್ ಎಂಜಿನ್ ಸರ್ಕಾರ ಕಳೆದ ಎಂಟು ವರ್ಷಗಳಿಂದ ಪಾಲಿಸಿಕೊಂಡು ಬಂದಿರುವ `ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ (ಶ್ರೀಮಂತರ ಪೋಷಣೆ ಮತ್ತು ಬಡವರ ವಿನಾಶ) ಎಂಬ ಜನವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಕೇಂದ್ರದ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ ಅಂತಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಿರುದ್ಯೋಗದ ಪ್ರಮಾಣದಲ್ಲಿ ಹೆಚ್ಚಾಗಿದೆ. ಅತ್ಯಂತ ಹೆಚ್ಚು ಸಂಖ್ಯೆಯಲ್ಲಿ ಅಂದರೆ ಸುಮಾರು ಶೇ.54ರಷ್ಟು ಉದ್ಯೋಗವನ್ನು ಸೃಷ್ಟಿಸುವ ಮತ್ತು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆಯನ್ನು ನೀಡುವ ಕೃಷಿ ಕ್ಷೇತ್ರವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. 2022-23ರ ಬಜೆಟ್ ಗೆ ಹೋಲಿಸಿದರೆ ಈ ಬಜೆಟ್ ನಲ್ಲಿ ಕೃಷಿಕ್ಷೇತ್ರಕ್ಕೆ ರೂ.8.468.21 ಕೋಟಿಯಷ್ಟು ಹಣ ಕಡಿಮೆ ನೀಡಲಾಗಿರುವುದೇ ಈ ನಿರ್ಲಕ್ಷ್ಯಕ್ಕೆ ಸಾಕ್ಷಿ. ಸಣ್ಣ ಮತ್ತು ಮಧ್ಯಮ ರೈತರನ್ನು ಕೂಡಾ ಕಡೆಗಣಿಸಲಾಗಿದೆ ಅಂತಾ ವಾಗ್ದಾಳಿ ನಡೆಸಿದ್ರು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ ಬಂಪರ್ – ಏನಿದು ಯೋಜನೆ? ಯಾರಿಗೆಲ್ಲ ಲಾಭ?
ಅಲ್ಲದೆ ಕರ್ನಾಟಕದ ಭದ್ರಾ ಮೇಲ್ದಂಡೆ (Karnataka Upper Bhadra Project) ಯೋಜನೆಗೆ ರೂ.5300 ಕೋಟಿ ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಈ ಯೋಜನೆ ಪೂರ್ಣಗೊಳ್ಳಬೇಕಾದರೆ ರೂ.23,000 ಕೋಟಿ ಅವಶ್ಯಕತೆಯಿದೆ. ಕೇಂದ್ರ ಸರ್ಕಾರ ನೀಡಲು ಒಪ್ಪಿರುವುದು ಯೋಜನಾ ವೆಚ್ಚದ ಕಾಲುಭಾಗ ಮಾತ್ರ. ಈ ಹಣದಲ್ಲಿ 40% ಕಮಿಷನ್ ಕಳೆದರೆ ಕೊನೆಗೆ ಯೋಜನೆಗೆ ಸಿಗಲಿರುವುದು ರೂ.3000 ಕೋಟಿಗಿಂತಲೂ ಕಡಿಮೆ. ನಿಗದಿ ಪಡಿಸಿರುವ ಹಣ ಕೂಡಾ ಒಂದು ವರ್ಷಕ್ಕೋ ಐದು ವರ್ಷಕ್ಕೋ ಎನ್ನುವುದನ್ನೂ ಸ್ಪಷ್ಟಪಡಿಸಿಲ್ಲ.
ಬಹಳ ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿರುವ ಈ ಯೋಜನೆ ಅನುಷ್ಠಾನಗೊಳ್ಳಬೇಕಾದರೆ ಬಿ ಸ್ಕೀಮ್ ಗೆ ಸಂಬಂಧಿಸಿದ ವ್ಯಾಜ್ಯ ಇತ್ಯರ್ಥವಾಗಬೇಕು. ಅಲ್ಲಿಯವರೆಗೆ ಈ ಹಣವನ್ನು ಖರ್ಚು ಮಾಡುವ ಹಾಗಿಲ್ಲ. ಕೃಷ್ಣಾ ಮೇಲ್ದಂಡೆ, ಮಹದಾಯಿ, ಮೇಕೆದಾಟು ಯೋಜನೆಗಳಿಗೆ ಪೈಸೆ ಹಣವನ್ನೂ ನೀಡಿಲ್ಲ ಅಂತಾ ಟೀಕಿಸಿದ್ರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k