ಬೆಂಗಳೂರು: ವಿಧಾನಪರಿಷತ್ ಚುನಾವಣಾ ಅಖಾಡ ಕಾವೇರಿದೆ. ಸರಣಿ ಟ್ವೀಟ್ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿಯನ್ನು ಬಿಜೆಪಿ ಕುಟುಕಿದೆ.
ಕೆಪಿಸಿಸಿ ಅಧ್ಯಕ್ಷ @DKShivakumar ಅವರೇ, ಸಿದ್ದರಾಮಯ್ಯ ಅವರ ಮೌನ ತುಂಬಾ ಅಪಾಯಕಾರಿ.
ಮುನಿಸಿಕೊಂಡಾಗಲೆಲ್ಲ ಪ್ರಕೃತಿ ಚಿಕಿತ್ಸೆಗೆ ತೆರಳುತ್ತಾರೆ. ಅಲ್ಲಿಂದ ಪ್ರಯೋಗಿಸುವ ರಾಜಕೀಯ ದಾಳ ಯಾರ್ಯಾರ ಬುಡ ಅಲ್ಲಾಡಿಸಿದೆ ಎಂಬುದು ನಿಮಗೆ ನೆನಪಿರಬಹುದಲ್ಲವೇ?
ಕೆಪಿಸಿಸಿ ಅಧ್ಯಕ್ಷ ಪಟ್ಟವನ್ನು ಭದ್ರವಾಗಿ ಹಿಡಿದಿಟ್ಟುಕೊಳ್ಳಿ.#SidduVsDKS
— BJP Karnataka (@BJP4Karnataka) November 24, 2021
Advertisement
ಪರಿಷತ್ ಚುನಾವಣೆಯ ಎಲ್ಲಾ ಪ್ರಕ್ರಿಯೆಗಳಿಂದ ಸಿದ್ದರಾಮಯ್ಯ ದೂರವಿದ್ದಾರೆ. ಏನಿದರ ಅರ್ಥ..? ಡಿಕೆಶಿ ನೀಡಿದ ಪಟ್ಟಿಯ ಬಗ್ಗೆ ಸಿದ್ದರಾಮಯ್ಯ ದಿವ್ಯ ಮೌನ ತಳೆದಿರುವುದೇಕೆ ಅಂತ ಪ್ರಶ್ನಿಸಿದೆ. ಡಿಕೆ ಶಿವಕುಮಾರ್ ಅವರೇ, ಸಿದ್ದರಾಮಯ್ಯ ಅವರ ಮೌನ ತುಂಬಾ ಅಪಾಯಕಾರಿ. ಅಂತ ಎಚ್ಚರಿಕೆಯ ಟ್ವೀಟ್ ಮಾಡಿದೆ. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಥೂ ಥೂ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಸಮಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್
Advertisement
ಪದಾಧಿಕಾರಿಗಳ ಪಟ್ಟಿ ಬಿಡುಗಡೆ ವಿಚಾರದಲ್ಲೂ ಡಿಕೆಶಿ ಹಾಗೂ ಸಿದ್ದರಾಮಯ್ಯ ಮಧ್ಯೆ ಯುದ್ಧ ನಡೆಯುತ್ತಿದೆ.
ಆದರೆ ಪರಿಷತ್ ಚುನಾವಣೆ ವಿಚಾರದಲ್ಲಿ ಬೇಸರಗೊಂಡಿರುವ ಸಿದ್ದರಾಮಯ್ಯ ಅವರೀಗ ಬೇರೆಯದೇ ಲೆಕ್ಕಾಚಾರದಲ್ಲಿ ತೊಡಗಿದಂತೆ ಕಾಣುತ್ತಿದೆ.
ಸಿದ್ದರಾಮಯ್ಯನವರೇ, ನಿಮ್ಮ ಮೌನವು ಬೇರೇನೋ ಸೂಚಿಸುತ್ತಿರುವುದು ನಿಜವಲ್ಲವೇ?#SidduVsDKS
— BJP Karnataka (@BJP4Karnataka) November 24, 2021
Advertisement
ಇತ್ತ ಬೆಳಗಾವಿಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಪಕ್ಷದ ಅಭ್ಯರ್ಥಿ ಮಹಾಂತೇಶ್ ಕವಟಗಿಮಠರವರಿಗೆ ಲಖನ್ ಸ್ಪರ್ಧೆಯಿಂದ ಸಮಸ್ಯೆ ಆಗಲ್ಲ. ಲಖನ್ ನಾಮಪತ್ರ ವಾಪಸ್ ಪಡೆಯೋದು ಅವರಿಗೆ ಬಿಟ್ಟಿದ್ದು ಅಂತ ಹೇಳಿದ್ರು. ಇದನ್ನೂ ಓದಿ: ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್!
Advertisement
ಸಿದ್ದರಾಮಯ್ಯ ಹಾಗೂ ಡಿಕೆಶಿ ಕಾಂಗ್ರೆಸ್ ಪಕ್ಷದ ಎರಡು ಕಣ್ಣು ಇದ್ದಂತೆ ಎಂದು ಪರಮೇಶ್ವರ್ ಅವರು ಇತ್ತೀಚೆಗೆ ಬಣ್ಣಿಸಿದ್ದರು.
ಆದರೆ ಪರಿಷತ್ ಚುನಾವಣೆ ಅಭ್ಯರ್ಥಿ ಆಯ್ಕೆಯ ವೇಳೆ ಈ ಎರಡು ಕಣ್ಣುಗಳ ದೃಷ್ಟಿ ಸಾಮರ್ಥ್ಯ ಬಯಲಾಗಿದೆ.
ಡಿಕೆಶಿ ನೀಡಿದ ಪಟ್ಟಿಯ ಬಗ್ಗೆ ಸಿದ್ದರಾಮಯ್ಯ ದಿವ್ಯ ಮೌನ ತಳೆದಿರುವುದೇಕೆ?#SidduVsDKS
— BJP Karnataka (@BJP4Karnataka) November 24, 2021
ಯಡಿಯೂರಪ್ಪ ಮಾತನಾಡಿ, 25 ಕ್ಷೇತ್ರಗಳ ಪೈಕಿ 20 ಸ್ಥಾನದಲ್ಲಿ ನಾವು ಅಭ್ಯರ್ಥಿ ಹಾಕಿದ್ದೇವೆ. ಕನಿಷ್ಠ 15 ಸೀಟ್ ನಲ್ಲಿ ನಾವು ಗೆಲ್ತೀವಿ ಅಂತ ವಿಶ್ವಾಸ ವ್ಯಕ್ತಪಡಿಸಿದರು. ಇತ್ತ ಅಬಕಾರಿ ಇಲಾಖೆ ಅಧಿಕಾರಿ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆ ಚುನಾವಣೆ ಕಾಂಗ್ರೆಸ್ ಬಿ ಫಾರಂ ಪಡೆದ್ರು. ಗಾಯಿತ್ರಿ ಶಾಂತೇಗೌಡ ಪರವಾಗಿ ಸೋದರ ಸಂಬಂಧಿಯಾಗಿರುವ ಸುನೀಲ್ ಬಿ ಫಾರಂ ಪಡೆದ್ರು. ಅಬಕಾರಿ ಇಲಾಖೆ ವ್ಯಾಪ್ತಿಯಲ್ಲಿ ಆಕ್ಷೇಪ ಕೇಳಿಬಂತು. ಈ ಮಧ್ಯೆ ತಾವು ತಟಸ್ಥವಾಗಿರೋದಾಗಿ ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ.
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಒಳಜಗಳ ಬಯಲಾಗಿದೆ.
ಅಭ್ಯರ್ಥಿ ಆಯ್ಕೆ, ಪ್ರಚಾರ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳಿಂದಲೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ದೂರ ಉಳಿದಿದ್ದಾರೆ.
ಏನಿದರರ್ಥ?#SidduVsDKS
— BJP Karnataka (@BJP4Karnataka) November 24, 2021