ಬೆಂಗಳೂರು: ನಾಡಿಗಾಗಿ ದುಡಿದು ಅತ್ಯುತ್ತಮ ಸಾಧನೆಯನ್ನು ಮಾಡಿ ಎಲ್ಲ ರಾಜಕಾರಣಿಗಳಿಗೆ ಸ್ಫೂರ್ತಿಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (S.M Krishna) ಅವರ ಸಾಧನೆಯನ್ನು ಮರೆಯಲು ಸಾಧ್ಯವಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ (K Gopalaiah) ಅವರು ತಿಳಿಸಿದರು.
Advertisement
ಬೆಂಗಳೂರಿನ ಸದಾಶಿವನಗರದಲ್ಲಿನ ಎಸ್.ಎಂ ಕೃಷ್ಣ ಅವರ ಮನೆಗೆ ತೆರಳಿ ಪದ್ಮವಿಭೂಷಣ (Padmavibhushan) ಪ್ರಶಸ್ತಿಗೆ ಆಯ್ಕೆಯಾಗಿರುವ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು. ನಮ್ಮ ರಾಜ್ಯದ ರಾಜಕಾರಣಿಗಳಿಗೆ ಎಸ್.ಎಂ ಕೃಷ್ಣ ಅವರು ಉತ್ತಮ ಮಾರ್ಗದರ್ಶಕರಾಗಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಹಾಗೂ ಗೃಹಮಂತ್ರಿ ಅಮಿತ್ ಶಾ (AmitShah) ಅವರು ಈ ಮಹಾನ್ ರಾಜಕಾರಣಿಯನ್ನು ಗುರುತಿಸಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆ ತಂದಿದೆ ಎಂದು ಹೇಳಿದರು.
Advertisement
Advertisement
ಮಂಡ್ಯ ಜಿಲ್ಲೆಯವರಾಗಿ ಎಸ್.ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತೆಗೆದುಕೊಂಡಂತಹ ಉತ್ತಮ ನಿರ್ಧಾರಗಳು ಹಾಗೂ ಅವರ ಸೇವೆಗೆ ಈ ಪ್ರಶಸ್ತಿ ಲಭಿಸಿದೆ. ಅವರಿಗೆ ಭಗವಂತನು ಹೆಚ್ಚಿನ ಆಯಸ್ಸು, ಆರೋಗ್ಯವನ್ನು ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. ಇದನ್ನೂ ಓದಿ: ಎಸ್.ಎಂ. ಕೃಷ್ಣ, ಎಸ್‍ಎಲ್ ಭೈರಪ್ಪ, ಸುಧಾಮೂರ್ತಿ ಸೇರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ
Advertisement
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಆರೋಗ್ಯ ಸಚಿವ ಡಾ.ಕೆ ಸುಧಾಕರ್ (Dr. K Sudhakar), ಕಂದಾಯ ಸಚಿವ ಆರ್.ಅಶೋಕ್ (R Ashok) ಹಾಗೂ ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಸೀಕ್ರೆಟ್ ಆಗಿ ದೆಹಲಿಗೆ ಹೋಗಿ ಬಂದಿದ್ರಾ ಯತ್ನಾಳ್? – ರೆಬೆಲ್ ಶಾಸಕ ಸದ್ಯಕ್ಕೆ ಸೇಫ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k