ನವದೆಹಲಿ: ಬೆಂಗಳೂರಿನ ಮಾಜಿ ಚೀಫ್ ಟ್ರೇನಿಂಗ್ ಕಮಾಂಡರ್ ಏರ್ ಮಾರ್ಷಲ್ ಆರ್ ಕೆಎಸ್ ಭಡೌರಿಯಾ ಅವರು ಭಾರತೀಯ ವಾಯು ಸೇನೆಯ ಮುಖ್ಯಸ್ಥರಾಗಲಿದ್ದಾರೆ.
Govt has decided to appoint Air Marshal RKS Bhadauria, PVSM, AVSM, VM, ADC presently Vice Chief of Air Staff as the next Chief of the Air Staff. @rajnathsingh @RajnathSingh_in @DefenceMinIndia @IAF_MCC @adgpi @indiannavy @PIB_India @PIBHindi
— A. Bharat Bhushan Babu (@SpokespersonMoD) September 19, 2019
ಪ್ರಸ್ತುತ ವಾಯು ಸೇನೆಯ ಉಪಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಭಡೌರಿಯಾ ಅವರನ್ನು ವಾಯು ಸೇನೆಯ ಮುಖ್ಯಸ್ಥರನ್ನಾಗಿ ನೇಮಿಸಲಾಗುತ್ತಿದೆ. ಭಡೌರಿಯಾ ಅವರು ಪರಮ ವಿಶಿಷ್ಟ ಸೇವಾ ಮೆಡಲ್, ಅತಿ ವಿಶಿಷ್ಟ ಸೇವಾ ಮೆಡಲ್, ವಾಯು ಸೇನಾ ಮೆಡಲ್ ಪಡೆದಿದ್ದಾರೆ. ಎಡಿಸಿಯ ಸುಪ್ರೀಂ ಕಮಾಂಡರ್ ಆಗಿ ಕಾರ್ಯನಿರ್ವಹಿಸಿದ್ದಾರೆ.
ಏರ್ ಚೀಫ್ ಮಾರ್ಷಲ್ ಬೀರೇಂದ್ರ ಸಿಂಗ್ ಧನೋವಾ ಅವರು 25ನೇ ಭಾರತೀಯ ವಾಯು ಸೇನೆಯ ಮುಖ್ಯಸ್ಥರಾಗಿದ್ದರು. ಸೆಪ್ಟೆಂಬರ್ 30ರಂದು ಧನೋವಾ ಅವರು ನಿವೃತ್ತಿ ಹೊಂದಲಿದ್ದು, ಈ ಹಿನ್ನೆಲೆ ಭಡೌರಿಯಾ ಅವರನ್ನು ಅವರ ಜಾಗಕ್ಕೆ ನೇಮಿಸಲಾಗಿದೆ.
ಭಡೌರಿಯಾ ಅವರು ಈ ವರೆಗೆ 4,250 ಗಂಟೆಗೂ ಹೆಚ್ಚು ಕಾಲ ವಿಮಾನ ಹಾರಾಟ ನಡೆಸಿದ್ದಾರೆ. ಒಟ್ಟು 26 ವಿವಿಧ ಯುದ್ಧ ವಿಮಾನಗಳು ಹಾಗೂ ಸಾಗಣಿಕಾ ವಿಮಾನಗಳಲ್ಲಿ ಹಾರಾಟ ನಡೆಸಿದ್ದಾರೆ. ಅಲ್ಲದೆ, ಪ್ರಾಯೋಗಿಕ ಪರೀಕ್ಷಾ ಪೈಲೆಟ್, ಕ್ಯಾಟ್ ‘ಎ’ ಅರ್ಹ ಫ್ಲೈಯಿಂಗ್ ಇನ್‍ಸ್ಟ್ರಕ್ಟರ್ ಹಾಗೂ ಪೈಲೆಟ್ ಅಟ್ಯಾಕ್ ಇನ್‍ಸ್ಟ್ರಕ್ಟರ್ ಅನುಭವ ಹೊಂದಿದ್ದಾರೆ. ಈ ಹಿಂದೆ ಫ್ರೆಂಚ್ ವಾಯುಪಡೆಯ ಮಾಂಟ್-ಡಿ-ಮಾರ್ಸನ್ ವಾಯುನೆಲೆಯಲ್ಲಿ ರಫೇಲ್ ವಿಮಾನವನ್ನು ಸಹ ಭಡೌರಿಯಾ ಹಾರಿಸಿದ್ದರು. ಭಡೌರಿಯಾ ಅವರು 1980ರಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‍ಗೆ ನಿಯೋಜನೆಗೊಂಡಿದ್ದರು.