– ಅನ್ನಪೂರ್ಣೇಶ್ವರಿಗೆ ರಥೋತ್ಸವ ಸೇವೆ
ಚಿಕ್ಕಮಗಳೂರು: ಲೋಕಸಭಾ ಚುನಾವಣೆ (General Elections 2024) ಹೊತ್ತಲ್ಲಿ ಟೆಂಪಲ್ ರನ್ ಮುಂದುವರಿಸಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B. S. Yediyurappa), ಕುಟುಂಬ ಸಮೇತರಾಗಿ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ (Horanadu Sri Annapoorneshwari Temple) ಭೇಟಿ ನೀಡಿದ್ದಾರೆ. ಇಂದು ಮುಂಜಾನೆಯಿಂದ ದೇವಾಲಯದಲ್ಲಿ ನಡೆಯುತ್ತಿರುವ ಚಂಡಿಕಾಯಾಗದಲ್ಲಿ ಅವರು ಭಾಗಿಯಾಗಿದ್ದಾರೆ.
Advertisement
ಯಡಿಯೂರಪ್ಪ, ಪುತ್ರ ವಿಜಯೇಂದ್ರ ಹಾಗೂ ರಾಘವೇಂದ್ರ ಅವರು ಶನಿವಾರ ರಾತ್ರಿ 9 ಗಂಟೆಗೆ ದೇವಾಲಯಕ್ಕೆ ಆಗಮಿಸಿ, ಅನ್ನಪೂರ್ಣೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಾಲಯದಲ್ಲೇ ತಂಗಿದ್ದು, ಇಂದು ಬೆಳಗ್ಗೆ 7 ಗಂಟೆಗೆ ಆರಂಭಗೊಂಡ ಯಾಗದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ – ಕಾಂಗ್ರೆಸ್‌ನ ನಾಲ್ಕನೇ ಪಟ್ಟಿ ರಿಲೀಸ್
Advertisement
Advertisement
ಶನಿವಾರ ರಾತ್ರಿ ಬಿಎಸ್‍ವೈ ಕುಟುಂಬದ ವತಿಯಿಂದ ಹೊರನಾಡಲ್ಲಿ ರಥೋತ್ಸವ ಸೇವೆ ಸಹ ನಡೆಯಿತು. ಈ ವೇಳೆ ಅನ್ನಪೂರ್ಣೇಶ್ವರಿ ದೇವಿಯ ರಥವನ್ನು ಯಡಿಯೂರಪ್ಪ, ವಿಜಯೇಂದ್ರ ಹಾಗೂ ರಾಘವೇಂದ್ರ ಅವರು ಎಳೆದರು. ರಥೋತ್ಸವ ಸೇವೆಯಲ್ಲಿ ಯಡಿಯೂರಪ್ಪ ಅವರ ಇಡೀ ಕುಟುಂಬ ಪಾಲ್ಗೊಂಡಿತ್ತು. ಇದನ್ನೂ ಓದಿ: Exclusive: ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಕುಕ್ಕರ್, ಸೀರೆ ಆರೋಪಕ್ಕೆ ಡಿ.ಕೆ.ಸುರೇಶ್ ಟಾಂಗ್
Advertisement