ಹುಬ್ಬಳ್ಳಿ: ಪ್ಯಾಲೆಸ್ತೀನ್‌ನಲ್ಲಿರುವ ಭಯೋತ್ಪಾದಕರಿಗೆ (Paletine Terrorists) ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಭಯೋತ್ಪಾದಕರು ಒಂದೇ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದರು.
ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಬೊಮ್ಮಾಯಿ ಅವರು, ಅಮಾಯಕರು, ಹೆಣ್ಣುಮಕ್ಕಳು, ಮಕ್ಕಳ ಮೇಲೆ ಬಾಂಬ್ ದಾಳಿ ಮಾಡಲಾಗುತ್ತಿದೆ. ಇದನ್ನು ಯಾವುದೇ ಸಮಾಜ ಹಾಗೂ ಸಮುದಾಯ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ; 60 ಕ್ಕೂ ಹೆಚ್ಚು ವಿದೇಶಿ ಪ್ರಜೆಗಳು ಸಾವು – ಯಾವ ದೇಶದ ಎಷ್ಟು ಮಂದಿ?
ಇದೊಂದು ಅಂತಾರಾಷ್ಟ್ರೀಯ ವಿಚಾರ. ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವೆ ಬಹಳ ವರ್ಷದ ಸಂಘರ್ಷ ಇದೆ. ಪ್ಯಾಲೆಸ್ತೀನ್ ಹಮಾಸ್ ಉಗ್ರವಾದಿಗಳು ಪ್ಯಾಲೆಸ್ತೀನ್ ನಾಗರಿಕರಲ್ಲ. ಅದನ್ನು ಕಾಂಗ್ರೆಸ್ ಮರೆಮಾಚಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ (Congress) ಮತ್ತೆ ತುಷ್ಟೀಕರಣದ ರಾಜಕಾರಣಕ್ಕೆ ಇಳಿಯುತ್ತಿದೆ. ಇದು ದೊಡ್ಡ ದುರಂತ ಎಂದು ಅಸಮಾಧಾನ ಹೊರಹಾಕಿದರು.
ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗ ಈ ಬಗ್ಗೆ ಮಾತನಾಡುತ್ತಾರೆ. ಅದು ಜಾತಿಗಣತಿ ಹೌದೋ ಅಲ್ಲೋ ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸ್ಪಷ್ಟತೆಯನ್ನು ನೀಡಬೇಕು ಎಂದರು. ಇದನ್ನೂ ಓದಿ: ಲಂಡನ್‌ನಲ್ಲಿ ಇಸ್ರೇಲ್, ಪ್ಯಾಲಿಸ್ತೀನ್ ಪರ ಪ್ರತಿಭಟನಾಕಾರರ ನಡುವೆ ಘರ್ಷಣೆ
160 ಕೋಟಿ ಖರ್ಚು ಮಾಡಿ ಜಾತಿ ಸಮೀಕ್ಷೆ ಮಾಡಿದ್ದು, ಅದು ಯಾವ ಜಾತಿ ಸಮೀಕ್ಷೆ ಎನ್ನುವ ಸ್ಪಷ್ಟತೆ ಇಲ್ಲ. ಅದರ ಬಗ್ಗೆ ಸ್ಪಷ್ಟತೆಯನ್ನು ಸರ್ಕಾರ ಮೊದಲು ಕೊಡಲಿ. ವರದಿ ಆಧಾರದ ಮೇಲೆ ಸಾಧಕ-ಬಾಧಕಗಳ ಕುರಿತು ಚರ್ಚಿಸೋಣ ಅಂತ ಕಾಂಗ್ರೆಸ್ಸಿನ ನಾಯಕರು ಹೇಳಿದ್ದಾರೆ. ಈ ಸಮೀಕ್ಷೆಯ ಫಲಶ್ರುತಿ ಸಮಾಜದ ಮೇಲೆ ಯಾವ ಪರಿಣಾಮ ಬೀರುತ್ತೆ? ಅದರ ಫಲಿತಾಂಶ ಏನಾಗುತ್ತೆ? ಕೆಲವರ್ಗದಲ್ಲಿ ಅಸಮಾಧಾನ ಉಂಟಾಗುತ್ತಾ? ಈ ಬಗ್ಗೆ ಮೊದಲು ಚರ್ಚೆಯಾಗಲಿ ಎಂದು ತಾಕೀತು ಮಾಡಿದರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]