ಬೆಂಗಳೂರು: ಪ್ರಜ್ವಲ್ (Prajwal Revanna) ಪ್ರಕರಣವನ್ನು ಯಾರೂ ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಗುಡುಗಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಹಿತಿ ಕೊಟ್ಟವರನ್ನೇ ಬಂಧನ ಮಾಡ್ತಿದ್ದಾರೆ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಅಂದರೆ ಸಿಬಿಐಗೆ (SIT) ವಹಿಸಲಿ ಎಂದು ತಿಳಿಸಿದರು. ಇದನ್ನೂ ಓದಿ: ಪರಿಷತ್ ಚುನಾವಣೆ; ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇಗೌಡ ಕಾಂಗ್ರೆಸ್ ಅಭ್ಯರ್ಥಿ
Advertisement
Advertisement
ಪರಿಷತ್ ಚುನಾವಣೆಗೆ ಟಿಕೆಟ್ ಸಂಬಂಧ ಕೆಲವರ ಅಸಮಾಧಾನ ವಿಚಾರವಾಗಿ ಮಾತನಾಡಿ, ಪರಿಷತ್‌ಗೆ ಹಲವರು ಆಕಾಂಕ್ಷಿಗಳು ಇದ್ದರು. ಟಿಕೆಟ್ ಕೈತಪ್ಪಿದಾಗ ಸಹಜವಾಗಿ ಬೇಸರ ಆಗುತ್ತೆ, ಸರಿ ಹೋಗುತ್ತದೆ. ಮೈತ್ರಿ ಬಗ್ಗೆ ವರಿಷ್ಠರು ಯಾವ ರೀತಿ ತೀರ್ಮಾನ ಮಾಡಿದ್ದಾರೋ ಅದರಂತೆ ನಡೆಯುತ್ತದೆ ಎಂದರು.
Advertisement
Advertisement
ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯರ‍್ಯಾರ ಹೆಸರು ಕೇಳಿಬರುತ್ತಿದೆಯೋ ಅವರ ವಿಚಾರಣೆಯನ್ನೂ ಮಾಡಲಿ. ಅದಕ್ಕೆ ನಾವು ಪ್ರಕರಣವನ್ನು ಸಿಬಿಐಗೆ ಕೊಡಲಿ ಅಂತಾ ಕೇಳುತ್ತಿರುವುದು ಎಂದು ಡಿಕೆಶಿ ವಿಚಾರಣೆಯೂ ಮಾಡಬೇಕು ಎಂಬ ಕೆಲವರ ಆಗ್ರಹವನ್ನು ಬೊಮ್ಮಾಯಿ ಸಮರ್ಥಿಸಿಕೊಂಡರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಟ್ವಿಸ್ಟ್; ಪ್ರೀತಂ ಗೌಡ ಆಪ್ತ ಸೇರಿ ಇಬ್ಬರು ಎಸ್‌ಐಟಿ ವಶಕ್ಕೆ