ಬೆಂಗಳೂರು: ಸಚಿವ ಕೆ. ವೆಂಕಟೇಶ್ (Minister K Venkatesh) ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಪ್ರಶ್ನಿಸಿದ್ದಾರೆ.
Advertisement
ಪಶು ಸಂಗೋಪನಾ ಸಚಿವ ವೆಂಕಟೇಶ್ ಅವರು ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು (If buffaloes can be slaughtered, why not cows) ಎಂದು ಪ್ರಶ್ನೆ ಮಾಡಿದ್ದರು. ಈ ಅಭಿಪ್ರಾಯಕ್ಕೆ ಬೊಮ್ಮಾಯಿ ಸರಣಿ ಟ್ವೀಟ್ ಮಾಡಿ ವೆಂಕಟೇಶ್ ಅವರನ್ನು ಕುಟುಕಿದ್ದಾರೆ.
Advertisement
Advertisement
ಟ್ವೀಟ್‌ನಲ್ಲಿ ಏನಿದೆ?
ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ.
Advertisement
ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೋ, ಹೈ ಕಮಾಂಡ್ ಮೆಚ್ಚಿಸಲೊ?. ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರು. ಪೂಜ್ಯ ಮಹಾತ್ಮಾ ಗಾಂಧಿ ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960 ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನು ತರಲಾಗಿದೆ. ಇದನ್ನೂ ಓದಿ: ಒಂದು ವೇಳೆ ಕವಚ್ ಅಳವಡಿಸಿದ್ದರೂ ಈ ದುರಂತವನ್ನು ತಪ್ಪಿಸಲು ಆಗುತ್ತಿರಲಿಲ್ಲ- ಅಪಘಾತಕ್ಕೆ ಕಾರಣ ತಿಳಿಸಿದ ರೈಲ್ವೇ
ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋ ಹತ್ಯೆ ಮಾಡುವ ಕಾರ್ಖಾನೆಗಳು ತಲೆ ಎತ್ತಲಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ.
ಈ ರೀತಿಯ ಹೇಳಿಕೆ ನೀಡುವ ಮೊದಲು ಸಚಿವರು ಆಲೋಚನೆ ಮಾಡಬೇಕು. ಈ ಬಗ್ಗೆ ಸಿದ್ದರಾಮಯ್ಯ ಅವರ ಸಚಿವರಿಗೆ ಸೂಕ್ತ ಸಲಹೆ ನೀಡುವ ಅವಶ್ಯಕತೆ ಇದೆ.