ಬೆಂಗಳೂರು: ಕಾಂಗ್ರೆಸ್ ಪಕ್ಷ ಕಾನೂನು ಪ್ರಕಾರ ತೆರಿಗೆ ಕಟ್ಟದೇ ತಮ್ಮ ತಪ್ಪು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಟೀಕಿಸಿದರು.
ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಅಕೌಂಟ್ ಸೀಜ್ ಮಾಡಿದೆ ಎಂದು ಆರೋಪ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಇದನ್ನೂ ಓದಿ: ಬಿಜೆಪಿಗೆ ಪ್ರಜಾತಂತ್ರ, ಸಂವಿಧಾನದ ಮೇಲೆ ನಂಬಿಕೆ ಇಲ್ಲ – ಸರ್ವಾಧಿಕಾರದಲ್ಲಿ ಮಾತ್ರ ನಂಬಿಕೆ: ಸಿಎಂ ವಾಗ್ದಾಳಿ
ಕಾಂಗ್ರೆಸ್ ಸರಿಯಾಗಿ ಕಾನೂನು ಪ್ರಕಾರ ಪ್ರತಿವರ್ಷ ಆದಾಯ ತೆರಿಗೆ ಕಟ್ಟದೇ ಮುಚ್ಚಿಟ್ಟುಕೊಂಡಿದ್ದು, ಆದಾಯ ತೆರಿಗೆ ಇಲಾಖೆ ತನ್ನ ಕಾರ್ಯವನ್ನು ಮಾಡಿದೆ. ಕಾಂಗ್ರೆಸ್‌ನವರು ಸರಿಯಾಗಿ ಕಾನೂನು ಮಾಡದೇ, ಜನರ ದಾರಿ ತಪ್ಪಿಸಲು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಕೇಂದ್ರದ ನಾಯಕರಿಗೆ ಸರಿಯಾಗಿ ಕಾನೂನು ಪಾಲನೆ ಮಾಡಲು ಹೇಳಿದರೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: 6 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಭರ್ತೃಹರಿ ಮಹತಾಬ್ ರಾಜೀನಾಮೆ