ಯಾದಗಿರಿ: ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಲ್ಲೂ ರಾಜಕೀಯ ಲೆಕ್ಕಾಚಾರ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪರ ಹೇಳಿಕೆಗೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆ ಯಾದಗಿರಿಯ ರೈಲ್ವೇ ನಿಲ್ದಾಣದಲ್ಲಿ ಮಾತನಾಡಿದ ಯಡಿಯೂರಪ್ಪನವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.
ಪ್ರಪಂಚಾದ್ಯಂತ ಪಾಕಿಸ್ತಾನ ನಡುವಳಿಕೆಗೆ ಖಂಡನೆ ವ್ಯಕ್ತವಾಗುತ್ತಿದೆ. ಈಗಲಾದರು ಪಾಕಿಸ್ತಾನ ತನ್ನ ತಪ್ಪು ಅರ್ಥ ಮಾಡಿಕೊಂಡು ಭಯೋತ್ಪಾದಕರಿಗೆ ತರಬೇತಿ ಕೊಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಪಾಕಿಸ್ತಾನ ಸರ್ವನಾಶವಾಗುತ್ತದೆ. ಅಜರ್ ನನ್ನು ವಿಶ್ವಮಟ್ಟದಲ್ಲಿ ಭಯೋತ್ಪಾದನಾ ಪಟ್ಟಿಯಲ್ಲಿ ಸೇರಿಸುವ ಪ್ರಯತ್ನ ಸ್ವಾಗತರ್ಹವಾಗಿದೆ. ಸೈನಿಕರ ವಿಚಾರ ಚುನಾವಣೆಗೆ ಬಳಕೆ ಮಾಡಿಕೊಳ್ಳುವ ಪ್ರಶ್ನೆ ಇಲ್ಲ ಎಂದು ಯಡಿಯೂರಪ್ಪನವರು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ರಾಜಕೀಯ ಲಾಭ ಕಾಣುತ್ತಿರುವ ಬಿಎಸ್‍ವೈ ಹೇಳಿಕೆಯಿಂದ ಸಂಶಯ- ಸಿದ್ದರಾಮಯ್ಯ
Advertisement
Advertisement
ವಿಗ್ ಕಮಾಂಡರ್ ಅಭಿನಂದನ್ ಪಾಕಿಸ್ತಾನ ವಶದಲ್ಲಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಕಾನೂನಿನಂತೆ ಅಭಿನಂದನ್‍ರನ್ನು ದೇಶಕ್ಕೆ ವಾಪಸ್ಸು ಕರೆತರಬೇಕು. ಸೆರೆಸಿಕ್ಕ ವ್ಯಕ್ತಿ ಮೇಲೆ ಹಲ್ಲೆ ನಡೆಸುವುದು ಕಾನೂನಿನಲ್ಲಿ ಅವಕಾಶವಿಲ್ಲ. ಭಾರತ ಅವರನ್ನು ವಾಪಸ್ ಕಳುಹಿಸಬೇಕು ಎಂದು ಕೇಳಿದೆ. ಹೀಗಾಗಿ ಪಾಕಿಸ್ತಾನ ಮತ್ತೊಂದು ಸಾಹಸಕ್ಕೆ ಪ್ರಯತ್ನಿಸುವುದಿಲ್ಲ. ಅಭಿನಂದನ್ ಅವರನ್ನು ವಾಪಸ್ ಕಳಿಸುವ ವಿಶ್ವಾಸವಿದೆ. ಸಿಎಂ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರ ಯಾವುದೇ ಮಾತನಾಡುವದಿಲ್ಲ ಎಂದರು.
Advertisement
ಸುಷ್ಮಾ ಸ್ವರಾಜ್ ಸರ್ವ ಪಕ್ಷದ ಸಭೆ ಕರೆದು ಎಲ್ಲಿ ಏನು ನಡೆದಿದೆ ಎಂದು ತಿಳಿಸಿದ್ದಾರೆ. ರಾಜನಾಥ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿ ಎಲ್ಲರನ್ನು ಕರೆದು ಗಡಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಹೀಗಾಗಿ ಈ ವಿಷಯದಲ್ಲಿ ರಾಜಕೀಯ ಲಾಭ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ದೇಶದ 135 ಕೋಟಿ ಜನರು ಅಭಿನಂದನೆ ಸಲ್ಲಿಸುವ ಕಾರ್ಯ ಭಾರತೀಯ ವಾಯು ಸೇನೆ ಮಾಡಿದೆ ಎಂದು ಯಡಿಯೂರಪ್ಪ ಸ್ಪಷ್ಟನೆ ತಿಳಿಸಿದ್ದಾರೆ.
Advertisement
ಬಿಎಸ್‍ವೈ ಹೇಳಿದ್ದೇನು..?
ಭಾರತೀಯ ವಾಯುಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಉಗ್ರರ ಮೇಲೆ ಭಾರತದ ವಾಯುಸೇನೆ ದಾಳಿಯ ಪರಿಣಾಮ ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಉಗ್ರರ ನೆಲೆಗಳ ಮೇಲೆ ಯಶಸ್ವಿಯಾಗಿ ನಡೆದ ಏರ್ ಸ್ಟ್ರೈಕ್ ನಿಂದಾಗಿ ದೇಶದಲ್ಲಿ ಬಿಜೆಪಿ ಪರ ಉತ್ತಮ ಅಲೆಯಿದೆ. ಭಾರತದಲ್ಲಿ ಇಂದಿನ ವಾತಾವರಣ ಭಾರತೀಯ ಜನತಾ ಪಕ್ಷದ ಪರವಾಗಿದೆ. ಪಾಕಿಸ್ತಾನದ ಒಳಗೆ ನುಗ್ಗಿ ನಮ್ಮ ವಾಯುಸೇನೆ ಉಗ್ರರ ನೆಲೆ ನಾಶ ಮಾಡಿದ್ದು ಸಂತೋಷವಾಗಿದೆ. ಅಲ್ಲದೇ 40 ವರ್ಷದ ಬಳಿಕ ಉಗ್ರ ನೆಲೆಗಳನ್ನು ಉಡೀಸ್ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಪರ ಅಲೆ ಇದೆ. ರಾಜ್ಯದಿಂದ 22 ಸಂಸದರನ್ನು ಕರೆದ್ಯೊಯ್ದು ಮೋದಿ ಅವರಿಗೆ ನಮ್ಮ ಕಾಣಿಕೆ ಕೊಡಬೇಕಿದೆ. ಅಲ್ಲಿಯವರೆಗೂ ನಾನು ಮನೆ ಸೇರುವುದಿಲ್ಲ ಎಂದು ಯಡಿಯೂರಪ್ಪ ಅವರು ಬುಧವಾರ ಚಿತ್ರದುರ್ಗದಲ್ಲಿ ಹೇಳಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv