ಹೆಚ್‌ಡಿಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ – ಅಭಿಮಾನಿಯಿಂದ ಕುಂಕುಮ ಅಕ್ಷತೆ ಸ್ವೀಕರಿಸಿದ ಮಾಜಿ ಸಿಎಂ

Public TV
1 Min Read
h.d.kumaraswamy dishcarge 1

ಬೆಂಗಳೂರು: ಅನಾರೋಗ್ಯದ ಕಾರಣ 4 ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಅವರು ಗುಣಮುಖರಾಗಿದ್ದು, ಇಂದು (ಭಾನುವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಹೆಚ್‌ಡಿಕೆ ಡಿಸ್ಚಾರ್ಜ್‌ ಆದ ಹಿನ್ನೆಲೆಯಲ್ಲಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಮತ್ತು ಕುಟುಂಬದ ಇತರೆ ಸದಸ್ಯರು ಆಸ್ಪತ್ರೆಗೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಯಿಂದ ಕುಮಾರಸ್ವಾಮಿ ಅವರು ಕುಂಕುಮ ಅಕ್ಷತೆ ಸ್ವೀಕರಿಸಿದರು.

ಡಿಸ್ಚಾರ್ಜ್‌ ಆದ ಬಳಿಕ ತಮಗೆ ಚಿಕಿತ್ಸೆ ನೀಡಿದ್ದ ವೈದ್ಯರೊಂದಿಗೆ ಹೆಚ್‌ಡಿಕೆ ಸುದ್ದಿಗೋಷ್ಠಿ ನಡೆಸಿದರು. ಮಾಜಿ ಸಿಎಂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದರು. ಬಳಿಕ ಹೆಚ್‌ಡಿಕೆ ಮಾತನಾಡಿ ತಮ್ಮ ಆರೋಗ್ಯ ಕುರಿತು ಮಾಹಿತಿ ಹಂಚಿಕೊಂಡರು.

Web Stories

Share This Article