Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ಪುತ್ರರನ್ನ TomorrowLand ಪಾರ್ಟಿಗೆ ನೀವೇ ಕಳಿಸಿ ಅವರ ಸಾವಿಗೆ ಕಾರಣರಾದಿರಿ ಎಂದು ಕೇಳಿದರೆ ಹೇಗೆ: ಸಿದ್ದು ವಿರುದ್ಧ ಹೆಚ್‌ಡಿಕೆ ಅಟ್ಯಾಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಮ್ಮ ಪುತ್ರರನ್ನ TomorrowLand ಪಾರ್ಟಿಗೆ ನೀವೇ ಕಳಿಸಿ ಅವರ ಸಾವಿಗೆ ಕಾರಣರಾದಿರಿ ಎಂದು ಕೇಳಿದರೆ ಹೇಗೆ: ಸಿದ್ದು ವಿರುದ್ಧ ಹೆಚ್‌ಡಿಕೆ ಅಟ್ಯಾಕ್‌

Bengaluru City

ನಿಮ್ಮ ಪುತ್ರರನ್ನ TomorrowLand ಪಾರ್ಟಿಗೆ ನೀವೇ ಕಳಿಸಿ ಅವರ ಸಾವಿಗೆ ಕಾರಣರಾದಿರಿ ಎಂದು ಕೇಳಿದರೆ ಹೇಗೆ: ಸಿದ್ದು ವಿರುದ್ಧ ಹೆಚ್‌ಡಿಕೆ ಅಟ್ಯಾಕ್‌

Public TV
Last updated: May 24, 2024 8:41 pm
Public TV
Share
4 Min Read
siddu hdk
SHARE

– ಪ್ರಜ್ವಲ್‌ಗೆ ವಿದೇಶಕ್ಕೆ ಕಳಿಸಿದ್ದೇ ದೇವೇಗೌಡರು ಎಂದಿದ್ದ ಸಿದ್ದರಾಮಯ್ಯಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ಪ್ರಜ್ವಲ್‌ನನ್ನು (Prajwal Revanna) ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರ (H.D.Deve Gowda) ಬಗ್ಗೆ ಲಘುವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಹೆಚ್‌ಡಿಕೆ (H.D.Kumaraswamy), ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಿಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಯಾಕೆ ರದ್ದು ಮಾಡಬಾರದು: ಪ್ರಜ್ವಲ್‌ಗೆ ವಿದೇಶಾಂಗ ಸಚಿವಾಲಯದಿಂದ ಶೋಕಾಸ್ ನೋಟಿಸ್

ಶ್ರೀ @siddaramaiah ನವರೇ..
ನಾನು ವಕೀಲನಾಗಿದ್ದೆ, ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ ಮಹಾನುಭಾವರು ಈ ವೃತ್ತಿಗೆ ಕಳಸಪ್ರಾಯರಾಗಿದ್ದಾರೆ. ದಯಮಾಡಿ ಅವರೆಲ್ಲರನ್ನು ಅಪಮಾನಿಸಬೇಡಿ.

“ಅತ್ಯಾಚಾರದ ವೀಡಿಯೊ ಹರಿದಾಡಿತು ಎನ್ನುವುದಕ್ಕಿಂತ,…

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 24, 2024

ದಯಮಾಡಿ ವಕೀಲಿಕೆ ಮಾಡಬೇಡಿ
ನಾನು ವಕೀಲನಾಗಿದ್ದೆ, ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ ಮಹಾನುಭಾವರು ಈ ವೃತ್ತಿಗೆ ಕಳಸಪ್ರಾಯರಾಗಿದ್ದಾರೆ. ದಯಮಾಡಿ ಅವರೆಲ್ಲರನ್ನು ಅಪಮಾನಿಸಬೇಡಿ. ‘ಅತ್ಯಾಚಾರದ ವೀಡಿಯೋ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ’ ಎನ್ನುವ ಆಣಿಮುತ್ತು ಉದುರಿಸಿದ್ದೀರಿ. ನಿಮ್ಮ ವಕೀಲಿಕೆಯ ಪಾಂಡಿತ್ಯದ ಬಗ್ಗೆ ಈ ನಿಮ್ಮ ಮಾತು ನನ್ನಲ್ಲಿ ಅನೇಕ ಪ್ರಶ್ನೆಗಳನ್ನು ಉಂಟು ಮಾಡಿದೆ ಎಂದು ಸಿಎಂಗೆ ಕುಮಾರಸ್ವಾಮಿ ಕುಟುಕಿದ್ದಾರೆ.

ಅತ್ಯಾಚಾರ ಅಮಾನುಷ ಸರಿ, ವೀಡಿಯೋ ಹಂಚುವುದೇನು?
ಅತ್ಯಾಚಾರ ಅಮಾನುಷ ಎನ್ನುವುದರಲ್ಲಿ ಎರಡನೇ ಮಾತಿಲ್ಲ. ಆದರೆ ಆ ಅಮಾನುಷಕ್ಕೆ ತುತ್ತಾದ ಹೆಣ್ಮಕ್ಕಳ ವೀಡಿಯೋಗಳನ್ನು ಹಂಚಿ ವಿಕೃತಾನಂದ ಅನುಭವಿಸುವುದು ಮಾನುಷವೇ? ಮನುಷ್ಯರು ಹೇಳುವ ಮಾತೇ ಇದು? ದಯಮಾಡಿ ನೀವು ಇನ್ನೆಂದೂ ನಾನು ವಕೀಲಿಕೆ ಮಾಡುತ್ತಿದ್ದೆ ಎನ್ನಬೇಡಿ. ನಿಮ್ಮ ಪಕ್ಕದಲ್ಲಿ ಪೆನ್‌ಡ್ರೈವ್ ಹಂಚಿಕೆದಾರ ಕೂತಿದ್ದಾರೆ. ಆ CD ಶಿವು ಚುನಾವಣಾ ಸ್ವಾರ್ಥಕ್ಕಾಗಿ ಹೆಣ್ಮಕ್ಕಳ ಮಾನವನ್ನು ಪೆನ್‌ಡ್ರೈವುಗಳಿಗೆ ತುಂಬಿಸಿ ಹಾದಿಬೀದಿಯಲ್ಲಿ ಮಾರಿಕೊಂಡಿದ್ದು ನಿಮಗೆ ಗೊತ್ತಿಲ್ಲವೇ? ಸ್ವಯಂ ಘೋಷಿತ ಸಂವಿಧಾನ ತಜ್ಞ ಬಿರುದಾಂಕಿತರಾದ ನೀವು, ಇಂಥ ಮಾನದ್ರೋಹಿಯನ್ನು ಪಕ್ಕದಲ್ಲೇ ಕೂರಿಸಿಕೊಳ್ಳಲು ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೇ? ಪ್ರಶ್ನೆ ಮಾಡಿಕೊಳ್ಳಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

PRAJWAL REVANNA 3

ನಿಮ್ಮ ಡಿಸಿಎಂ ಅನ್ನು ಪ್ರಶ್ನಿಸಿದ್ದೀರಾ?
ನಿಮ್ಮ ಉಪಮುಖ್ಯಮಂತ್ರಿ ಮಹಾಶಯ ಪೆನ್‌ಡ್ರೈವ್ ಹಂಚಿಕೆಯಲ್ಲಿ ಶಾಮೀಲಾಗಿಲ್ಲವೇ? ದೇವರಾಜೇಗೌಡ, ಬ್ರೋಕರ್ ಶಿವರಾಮೇಗೌಡ, ಡಿ.ಕೆ.ಶಿವಕುಮಾರ್ ನಡುವಿನ ಮೊಬೈಲ್ ಸಂಭಾಷಣೆ ನಿಮ್ಮ ಸರ್ಕಾರದ ಮಾನವನ್ನು ಹಾಸನದಲ್ಲಿ ಪೆನ್‌ಡ್ರೈವ್ ರೂಪದಲ್ಲಿ ವೋಟಿಗೆ ಹರಾಜಾಗಲಿಲ್ಲವೇ? ಚಾಲಕ ಕಾರ್ತಿಕ್ ಗೌಡ ಆ ನೊಂದ ಮಹಿಳೆಯರ ಅಶ್ಲೀಲ ವೀಡಿಯೋಗಳನ್ನು ತುಂಬಿದ್ದ ಮೊದಲ ಪೆನ್‌ಡ್ರೈವನ್ನು ನಿಮಗೆ ತಂದು ಕೊಡಲಿಲ್ಲವೇ ಎಂದು ನಿಮ್ಮ ಉಪಮುಖ್ಯಮಂತ್ರಿಯನ್ನು ಒಮ್ಮೆಯಾದರೂ ಕೇಳಿದ್ದೀರಾ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಎಸ್‌ಐಟಿ ಸಹಾಯವಾಣಿಗೆ 30 ಕ್ಕೂ ಹೆಚ್ಚು ಕರೆ

ಪ್ರಜ್ವಲ್ ರೇವಣ್ಣ ಅವರನ್ನು ನಾನೆಂದೂ ಸಮರ್ಥನೆ ಮಾಡಿಲ್ಲ, ಮಾಡುವುದೂ ಇಲ್ಲ. ಪ್ರಕರಣ ಹೊರಬಂದ ಮೊದಲ ದಿನವೇ ‘ಈ ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ ಎಂದು ಹೇಳಿದ್ದೇನೆ. ನನ್ನ ಹೇಳಿಕೆ ನಿಮಗೆ ಗೊತ್ತಾಗಲಿಲ್ಲವೇ? ನಿಮಗೆ ಪತ್ರಿಕೆ ಓದುವ ಅಭ್ಯಾಸ ಇಲ್ಲದಿದ್ದರೆ ನಾನೇನು ಮಾಡಲಿ ಎಂದಿದ್ದಾರೆ.

DKSHI 2

ದೇವೇಗೌಡರ ಬಗ್ಗೆ ನೀವು ಕಾರಿಕೊಂಡ ವಿಷದ ಬಗ್ಗೆ ಹೇಳುವುದಾದರೆ; ನನ್ನ ಮಾತಿಗೆ ಗೌರವ ಕೊಟ್ಟು ಪ್ರಜ್ವಲ್ ವಾಪಸ್ ಬಂದು SIT ಮುಂದೆ ಹಾಜರಾಗದಿದ್ದರೆ ಕುಟುಂಬದಿಂದ ಹೊರ ಹಾಕುತ್ತೇನೆ ಎಂದು ದೇವೇಗೌಡರು ಎಚ್ಚರಿಕೆ ನೀಡಿದ್ದಾರೆ. ಅವರ ಮಾತೇ ನಮ್ಮ ಕುಟುಂಬದ ಮಾತು. ಆದರೆ ನೀವು ಹೇಳಿದ್ದೇನು? ಪ್ರಜ್ವಲ್‌ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದಿದ್ದೀರಿ! ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹಾಸನ ಜಿಲ್ಲೆಯ ಜನ ನನ್ನ ಕೈ ಬಿಡಲ್ಲ: ರೇವಣ್ಣ

ನಮ್ಮ ಮನೆಗಳ ಮೇಲೆ ಕಳ್ಳಕಿವಿ ಇಟ್ಟಿದ್ದೀರಿ
ಅವನು ದೇವೇಗೌಡರಿಗೆ ಹೇಳಿಯೇ ವಿದೇಶಕ್ಕೆ ಹೋಗಿದ್ದಾನೆ ಎಂದು ಹೇಳಿದ್ದೀರಿ. ನಿಮಗೆ ಹೇಗೆ ಗೊತ್ತು? ನಿಮ್ಮ ಪಕ್ಷದಲ್ಲೇ ಕೂರುವ CD ಶಿವು ಮಾಡುತ್ತಿರುವ ಮಾನಗೇಡಿ ಕೃತ್ಯಗಳು ಗೊತ್ತಾಗೋದಿಲ್ಲ ನಿಮಗೆ!? ಆದರೆ, ದೇವೇಗೌಡರ ಮನೆಯಲ್ಲಿ ನಡೆಯೋದೆಲ್ಲ ನಿಮಗೆ ಗೊತ್ತಾಗುತ್ತದೆಯೇ!? ಅದು ಹೇಗೆ? ನನ್ನ ಮತ್ತು ದೇವೇಗೌಡರ ಮನೆಗೆ ಕಳ್ಳಕಿವಿ ಇಟ್ಟಿದ್ದೀರಿ ಎನ್ನುವ ನನ್ನ ಆರೋಪ ಸತ್ಯ ಎಂದ ಹಾಗಾಯಿತು ಅಲ್ಲವೇ? ಅಸತ್ಯ ಹೇಳುವ ಅಗತ್ಯ ನಮಗಿಲ್ಲ. ಅವನು ಕುಟುಂಬದ ಸಂಪರ್ಕದಲ್ಲಿ ಇಲ್ಲ. ಹಿಂದೆಯೂ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.

rakesh siddaramaiah

ಇಂಟೆಲಿಜೆನ್ಸ್ ಇಟ್ಟುಕೊಂಡಿರುವ ನಿಮಗೇನೂ ಗೊತ್ತಿಲ್ಲವೇ?
ಪಕ್ಷದ ಅಧ್ಯಕ್ಷನಾಗಿ ಆತನ ವಿರುದ್ಧ ಕ್ರಮ ಕೈಗೊಂಡಿದ್ದೇನೆ. ಆತನ ಮೇಲಿರುವ ಆರೋಪ ಸಾಬೀತಾದರೆ ಪಕ್ಷದಲ್ಲಿ ಆತನಿಗೆ ಸ್ಥಾನವಿಲ್ಲ. ನಿಮಗೆ ಸಂಶಯ ಸಲ್ಲ. ಇನ್ನು SIT ತನಿಖೆ ಅಂತೀರಾ? SIT ಹೆಸರಿನಲ್ಲಿ ಎಷ್ಟು ಸ್ಲೀಪರ್ ಸೆಲ್‌ಗಳು ತನಿಖೆ ಮಾಡುತ್ತಿವೆ ಎಂದು ಬಿಚ್ಚಿಟ್ಟರೆ ನಿಮ್ಮ ಸರ್ಕಾರದ ಕಥೆ ಮುಗಿದೇ ಹೋಗುತ್ತದೆ. CD ಶಿವು ಆದೇಶದ ಮೇರೆಗೆ ಪೆನ್‌ಡ್ರೈವ್‌ಗಳನ್ನು ಹಂಚಿದ ಕಿರಾತಕರೆಲ್ಲ ದಿನ ಬೆಳಗಾದರೆ ಯಾರ ಮನೆಯಲ್ಲಿ ಪ್ರತ್ಯಕ್ಷರಾಗುತ್ತಾರೆ? ವಿಧಾನಸೌಧದಲ್ಲಿ ಯಾರ ಕಚೇರಿಯೊಳಕ್ಕೆ ನುಸಳುತ್ತಾರೆ ಎನ್ನುವುದು ಇಂಟೆಲಿಜೆನ್ಸ್ ಅನ್ನು ಇಟ್ಟುಕೊಂಡಿರುವ ನಿಮಗೇ ಗೊತ್ತಿಲ್ಲದಿದ್ದರೆ ಹೇಗೆ ಎಂದು ಸಿಎಂಗೆ ಟಾಂಗ್ ಕೊಟ್ಟಿದ್ದಾರೆ.

ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ
ನಿಮ್ಮ ಸುಪುತ್ರ, ದಿವಂಗತ ರಾಕೇಶ್ ಅವರನ್ನು ಟುಮಾರೋಲ್ಯಾಂಡ್ (TomorrowLand) ಎನ್ನುವ ಅಮಲಿನ ಪಾರ್ಟಿಗೆ ನೀವೇ ಕಳಿಸಿದ್ದಿರಿ. ಅಲ್ಲಿ ಅವರ ಸಾವಿಗೆ ನೀವೇ ಕಾರಣರಾದಿರಿ ಎಂದು ಯಾರಾದರೂ ನಿಮ್ಮನ್ನು ಕೇಳಿದರೆ ನಿಮ್ಮ ಮನಸ್ಸಿಗೆ ಹೇಗಾಗಬೇಡ? ದೇವೇಗೌಡರ ಬಗ್ಗೆ ನೀವು ಕೇಳಿದ್ದು ಕೂಡ ಹಾಗೆಯೇ ಅಲ್ಲವೇ ಮಾನ್ಯ ಮುಖ್ಯಮಂತ್ರಿಗಳೇ.. ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ. ದಯಮಾಡಿ ಅರ್ಥ ಮಾಡಿಕೊಳ್ಳಿ ಕುಮಾರಸ್ವಾಮಿ ಹೇಳಿದ್ದಾರೆ.

TAGGED:h d kumaraswamyprajwal revannasiddaramaiahಪ್ರಜ್ವಲ್ ರೇವಣ್ಣಸಿದ್ದರಾಮಯ್ಯಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
3 hours ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
3 hours ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
3 hours ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
3 hours ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
4 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?