ಬೆಂಗಳೂರು: ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಕಿಡಿಕಾರಿದ್ದಾರೆ.
ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ.4/4#ಜನರ_ಬದುಕು_ಹಾಲಾಹಲ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023
Advertisement
ಟ್ವೀಟ್ ಮೂಲಕ ಬೆಲೆ ಏರಿಕೆ ಪ್ರಶ್ನಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಹೆಚ್‌ಡಿಕೆ, ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ. ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ ಎಂದು ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ಆ.1 ರಿಂದ ಹಾಲಿನ ದರ 3 ರೂ. ಹೆಚ್ಚಳ- ಯಾವುದಕ್ಕೆ ಎಷ್ಟು?
Advertisement
ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ.3/4#ಬೆಲೆ_ಏರಿಕೆ_ಗ್ಯಾರಂಟಿ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023
Advertisement
ಟ್ವೀಟ್‌ನಲ್ಲಿ ಏನಿದೆ?
ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರ್ಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರ್ಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ.
Advertisement
ಆಲ್ಕೊಹಾಲಿನ ಬೆಲೆ ಏರಿಸಿದ ನಂತರ @INCKarnataka ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ!!! 1/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023
ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ. ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ.
ಸದನ ಸಮಿತಿಯ ಕೊನೆ ಪ್ಯಾರಾ ಓದಿಕೊಳ್ಳಿ. ಸಮಿತಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ನಿಮಗೆ ಧೈರ್ಯವಿದ್ದರೆ ಸಿಬಿಐ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ. ನೂರಾ ಮೂವತ್ತೈದು ಸೀಟುಗಳ ಬಹುಮತ ಸರಕಾರ ನಿಮ್ಮದಲ್ಲವೇ? ನುಡಿದಂತೆ ನಡೆಯುವ ಸರಕಾರ ನಿಮ್ಮದಲ್ಲವೇ??
ನೀವು ನುಡಿದಂತೆ ನಡೆಯುವ ಸಮಯ ಬಂದಿದೆ. ನಡೆದು ತೋರಿಸುವಿರಾ?10/10
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023
ಸದನ ಸಮಿತಿಯ ಕೊನೆ ಪ್ಯಾರಾ ಓದಿಕೊಳ್ಳಿ. ಸಮಿತಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ನಿಮಗೆ ಧೈರ್ಯವಿದ್ದರೆ ಸಿಬಿಐ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ. ನೂರಾ ಮೂವತ್ತೈದು ಸೀಟುಗಳ ಬಹುಮತ ಸರ್ಕಾರ ನಿಮ್ಮದಲ್ಲವೇ? ನುಡಿದಂತೆ ನಡೆಯುವ ಸರ್ಕಾರ ನಿಮ್ಮದಲ್ಲವೇ? ನೀವು ನುಡಿದಂತೆ ನಡೆಯುವ ಸಮಯ ಬಂದಿದೆ. ನಡೆದು ತೋರಿಸುವಿರಾ? ಇದನ್ನೂ ಓದಿ: ಮಹಾರಾಷ್ಟ್ರ ಭೂಕುಸಿತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳನ್ನು ದತ್ತು ಪಡೆದ ಸಿಎಂ
ತಾವು ಈಗ ಫುಲ್ ಬ್ಯುಸಿ, ನಾನು ಬಲ್ಲೆ. ಆದರೂ ಕೊಂಚ ಬಿಡುವು ಮಾಡಿಕೊಳ್ಳಿ, ಸದನ ಸಮಿತಿ ವರದಿಯ ಮೇಲೆ ಕಣ್ಣಾಡಿಸಿ. ದೇವೇಗೌಡರು ಸಿಎಂ ಆಗಿದ್ದ 1995ರ ಅಕ್ಟೋಬರ್, ನವೆಂಬರಿನಲ್ಲಿ ಈ ಯೋಜನೆಗೆ ಸಹಿ ಹಾಕುವ ವೇಳೆ ಇಂದಿನ ಮುಖ್ಯಮಂತ್ರಿಗಳೂ ಅಂದು ಹಣಕಾಸು ಸಚಿವರಾಗಿದ್ದರು.ಅವರಿಗೂ ಸತ್ಯ ಗೊತ್ತಿರುತ್ತದೆ. ಒಮ್ಮೆ ವಿಚಾರಿಸಲು ನಿಮಗೇನು ಸಮಸ್ಯೆ? 9/10
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023
ತಾವು ಈಗ ಫುಲ್ ಬ್ಯುಸಿ, ನಾನು ಬಲ್ಲೆ. ಆದರೂ ಕೊಂಚ ಬಿಡುವು ಮಾಡಿಕೊಳ್ಳಿ. ಸದನ ಸಮಿತಿ ವರದಿಯ ಮೇಲೆ ಕಣ್ಣಾಡಿಸಿ. ದೇವೇಗೌಡರು ಸಿಎಂ ಆಗಿದ್ದ 1995ರ ಅಕ್ಟೋಬರ್, ನವೆಂಬರಿನಲ್ಲಿ ಈ ಯೋಜನೆಗೆ ಸಹಿ ಹಾಕುವ ವೇಳೆ ಇಂದಿನ ಮುಖ್ಯಮಂತ್ರಿಗಳೂ ಅಂದು ಹಣಕಾಸು ಸಚಿವರಾಗಿದ್ದರು. ಅವರಿಗೂ ಸತ್ಯ ಗೊತ್ತಿರುತ್ತದೆ. ಒಮ್ಮೆ ವಿಚಾರಿಸಲು ನಿಮಗೇನು ಸಮಸ್ಯೆ?
ನೈಸ್ ಯೋಜನೆಗೆ ಹೆಚ್.ಡಿ. ದೇವೇಗೌಡ ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು. ಆದರೆ ಅದೇ ದೇವೇಗೌಡರ ಕಾಲದಲ್ಲಿ ಆಗಿದ್ದ ಮೂಲ ಒಪ್ಪಂದದ ಬಗ್ಗೆ ಅವರದ್ದು ಧ್ಯಾನಸ್ಥ ಮೌನ. ಯಾಕೆ ಎಂದು ಪ್ರಶ್ನಿಸಿದ್ದಾರೆ.
Web Stories