ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಭೇಟಿ ಕುರಿತು ಸ್ಪಷ್ಟನೆಯನ್ನೂ ನೀಡಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು (ಬುಧವಾರ) ಮಾಜಿ ಸಿಎಂ ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ದೆಹಲಿ ಬಿಜೆಪಿ ನಾಯಕರ ಭೇಟಿ ವಿಚಾರವನ್ನು ಅಲ್ಲಗಳೆದರು. ಇದನ್ನೂ ಓದಿ: ವ್ಯಕ್ತಿಗತವಾಗಿ ಯಾರ ಬಗ್ಗೆಯೂ ಟೀಕೆ ಬೇಡ- ರೇಣುಕಾಗೆ ವಿಜಯೇಂದ್ರ ತಾಕೀತು
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಂಬಂಧ ಯಾವುದೇ ಸೀಟು ಹಂಚಿಕೆ ಕುರಿತು ಚರ್ಚಗೆ ಹೋಗ್ತಿಲ್ಲ. ಬದಲಾಗಿ ವೈಯಕ್ತಿಕ ಕೆಲಸದ ನಿಮಿತ್ತ ಹೋಗುತ್ತಿದ್ದೇನೆ. ದೆಹಲಿಗೆ ಹೋಗೋದು ಏನ್ ವಿಶೇಷನಾ ಎಂದು ಕೇಳಿದರು.
ಸೀಟು ಹಂಚಿಕೆ ಕುರಿತು ಬಿಜೆಪಿ ನಾಯಕರ ಜೊತೆ ಚರ್ಚೆಗೆ ತೆರಳುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಅದನ್ನು ಕುಮಾರಸ್ವಾಮಿ ಅವರು ಅಲ್ಲಗಳೆದಿದ್ದಾರೆ. ದೆಹಲಿಯತ್ತ ಬಿಳಿ ಶರ್ಟ್, ಬಿಳಿ ಪಂಚೆ ಉಡುಗೆಯಲ್ಲಿ ಪ್ರಯಾಣ ಬೆಳೆಸಿದ್ದಾರೆ. ಇದನ್ನೂ ಓದಿ: ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ: ಆರ್. ಅಶೋಕ್