Connect with us

Bengaluru City

ಪೊಲೀಸರ ಗೋಲಿಬಾರ್‌ಗೆ ಖಂಡನೆ – ಏತಕ್ಕಾಗಿ ಬಲಿ ಅಂತ ಹೆಚ್‍ಡಿಕೆ ಪ್ರಶ್ನೆ

Published

on

ಬೆಂಗಳೂರು: ಪೌರತ್ವ ವಿರೋಧಿ ಪ್ರತಿಭಟನೆ ಹತ್ತಿಕ್ಕುವ ಬಿಎಸ್‍ವೈ ಸರ್ಕಾರದ ನಡೆ, ಪೊಲೀಸರ ಗೋಲಿಬಾರನ್ನು ಮಾಜಿ ಸಿಎಂ ಕುಮಾರಸ್ವಾಮಿ ಉಗ್ರವಾಗಿ ಖಂಡಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಹಿಂಸಾತ್ಮಕ ಪ್ರತಿಭಟನೆ ಜನರ ಅಸ್ತ್ರ. ಶಾಂತಿಯುತ ಪ್ರತಿಭಟನೆಯನ್ನೂ ಅರಗಿಸಿಕೊಳ್ಳಲಾಗದ ಕೇಂದ್ರ-ರಾಜ್ಯ ಸರ್ಕಾರಗಳು ಪೊಲೀಸ್ ಬಲಪ್ರಯೋಗದ ಮೂಲಕ ಸಮಾಜದಲ್ಲಿ ಪ್ರಕ್ಷುಬ್ಧ ವಾತಾವರಣವನ್ನು ನಿರ್ಮಿಸತೊಡಗಿರುವುದು ದೊಡ್ಡ ದುರಂತ. ಜನಸಾಮಾನ್ಯರು ಭಯ ಭೀತಿಯ ವಾತಾವರಣದಲ್ಲಿ ಬದುಕುವಂತಾಗಿದೆ. ರಾಜ್ಯದ ಮಂಗಳೂರು, ಕಲಬುರಗಿ ಸೇರಿದಂತೆ ದೇಶದ ಹಲವೆಡೆ ‘ಕಂಡಲ್ಲಿ ಗುಂಡಿಕ್ಕುವ’ ಆತಂಕದಲ್ಲಿ ಜನತೆ ಕಂಗಾಲಾಗಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಕೇಂದ್ರ-ರಾಜ್ಯ ಸರ್ಕಾರಗಳು ಪ್ರತಿಭಟನೆಗೆ ನಿರ್ಬಂಧ ಹೇರ ತೊಡಗಿರುವುದು ತುರ್ತುಪರಿಸ್ಥಿತಿಯ ಮುನ್ಸೂಚನೆ ಎಂಬಂತಿದೆ. ಅಲ್ಲದೆ, ಸರ್ಕಾರಕ್ಕೆ ಐದು ಪ್ರಶ್ನೆಗಳನ್ನು ಎಸೆದಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ಇಂಟರ್‌ನೆಟ್‌ ಸೇವೆ ಸ್ಥಗಿತಕ್ಕೆ ಡಿಜಿಪಿ ಆದೇಶ

ಬಿಎಸ್‍ವೈ ವಿರುದ್ಧ ಎಚ್‍ಡಿಕೆ ಟ್ವೀಟಾಸ್ತ್ರ!
* ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಇಬ್ಬರು ಅಮಾಯಕರನ್ನು ರಾಜ್ಯ ಸರ್ಕಾರ ಗೋಲಿಬಾರ್ ನಡೆಸಿ ‘ಬಲಿ’ ತೆಗೆದುಕೊಂಡಿದ್ದು ಯಾವ ಕಾರಣಕ್ಕೆ..? ಯಾರನ್ನು ಮೆಚ್ಚಿಸಲು ಇಂತಹ ಮತಿಗೇಡಿ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡದ್ದು..? ಇದನ್ನೂ ಓದಿ: ಮಂಗಳೂರಿನಲ್ಲಿ ಗೋಲಿಬಾರ್, ಇಬ್ಬರು ಬಲಿ- ಗುಂಡು ಹಾರಿಸಿದ್ದಕ್ಕೆ ಪೊಲೀಸ್ ಆಯುಕ್ತರಿಂದ ಸ್ಪಷ್ಟನೆ

* ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮೆಚ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಅಮಾಯಕರ ಮೇಲೆ ಗುಂಡು ಸಿಡಿಸಿತೆ..? ಅಧಿಕಾರಿಗಳು ತಾವಾಗಿಯೇ ಶಾಂತಿಯುತ ಪ್ರತಿಭಟನೆ ತಹಬದಿಗೆ ತರಲು ಅವಿವೇಕದ ನಿರ್ಧಾರ ಕೈಗೊಂಡರೋ..? ರಾಜ್ಯ ಸರ್ಕಾರ ಶೌರ್ಯ ಪ್ರದರ್ಶನಕ್ಕೆ ಇಂತಹ ಆದೇಶ ನೀಡಿತೆ..?

* ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಅಸ್ಸಾಂನಲ್ಲಿ ಮೊದಲು ತೀವ್ರತರವಾದ ಪ್ರತಿಭಟನೆ ಆಕ್ರೋಶ, ಭುಗಿಲೆದ್ದಿತು. ಆದರೆ ಅಲ್ಲಿ ನಡೆಯದ ಗೋಲಿಬಾರ್ ಶಾಂತಿಯುತ ಪ್ರತಿಭಟನೆ ನಡೆಯುತ್ತಿದ್ದ ರಾಜ್ಯದಲ್ಲಿ ನಡೆದಿದ್ದಾದರೂ ಯಾಕೆ..? ಅಮಾಯಕರ ‘ರಕ್ತ ತರ್ಪಣ’ ಕೊಡುವ ಮೂಲಕ ಯಾರಿಗೆ ಯಾವ ಸಂದೇಶ ರವಾನಿಸಿದಿರಿ..?

* ಪೊಲೀಸರ ಗುಂಡಿಗೆ ಬಲಿಯಾದ ಅಮಾಯಕರ ಕುಟುಂಬದ ಜವಾಬ್ದಾರಿ ಹೊರುವವರುವವರು ಯಾರು..? ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಯಾರೂ ಪ್ರತಿಭಟಿಸಲೇ ಬಾರದೆ..? 4 ತಿಂಗಳ ಆಡಳಿತ ಅವಧಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ‘ಪವಿತ್ರ ಸರ್ಕಾರ’ ಮಾಡಲು ಹೊರಟಿರುವುದು ಏನು..?

* ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸಿದಂತೆ ಪ್ರತಿಭಟನೆಗೆ ನಿರ್ಬಂಧ ಹೇರಲು ಕಾರಣಗಳೇನು..? ಇದರ ಹಿಂದಿರುವ ಹಕೀಕತ್ತಾದರೂ ಏನು..?

Click to comment

Leave a Reply

Your email address will not be published. Required fields are marked *