Connect with us

Bengaluru City

ಕೇಂದ್ರದ ವಿರುದ್ಧ ಹೆಚ್‍ಡಿಕೆ ಆಕ್ರೋಶ

Published

on

ಬೆಂಗಳೂರು: ಭಾರತದ ಇತಿಹಾಸ ಸಂಸ್ಕೃತಿ, ಜಗತ್ತಿನ ಇತರ ಸಂಸ್ಕೃತಿಯೊಂದಿಗೆ ಇರೋ ಸಂಪರ್ಕ ಕುರಿತು ಅಧ್ಯಯನಕ್ಕೆ ಕೇಂದ್ರ ಸರ್ಕಾರ ತಂಡ ರಚನೆ ಮಾಡಿದೆ. ಕೇಂದ್ರದ ಸಮಿತಿಯಲ್ಲಿ ಕನ್ನಡಿಗರು, ದ್ರಾವಿಡ ಪರಂಪರೆಯ ಸದಸ್ಯರು ಇಲ್ಲದ್ದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ, ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾದುವೆ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ?

ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ,ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಈ ಬೆನ್ನಲ್ಲೇ ಹೆಚ್‍ಡಿಕೆ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ.

Click to comment

Leave a Reply

Your email address will not be published. Required fields are marked *