ಬೆಂಗಳೂರು: ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ಡಿ.ಎ ಶಿವಕುಮಾರ್ ಪರ ಕೊನೆಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಬ್ಯಾಟಿಂಗ್ ಮಾಡಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಎಚ್‍ಡಿಕೆ, ಇಡಿ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ಗೌರಿ-ಗಣೇಶ ಹಬ್ಬದ ದಿನದಲ್ಲೂ ವಿಚಾರಣೆ ನಡೆಸುತ್ತಿರುವ ಇಡಿ ವರ್ತನೆಗೆ ಕಿಡಿಕಾರಿದ್ದಾರೆ.
Advertisement
Gowri Ganesha is an important festival for Hindus. Mr. @DKShivakumar had asked for a day to observe the festival. However, ED officials denied him even this. If this is not vindictive attitude, then what is?
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 1, 2019
Advertisement
ಗೌರಿ-ಗಣೇಶ ಹಿಂದೂಗಳ ಪ್ರಮುಖ ಹಬ್ಬವಾಗಿದೆ. ಡಿಕೆ ಶಿವಕುಮಾರ್ ಅವರು ಅಧಿಕಾರಿಗಳ ಬಳಿ ಒಂದು ದಿನ ವಿಚಾರಣೆಗೆ ವಿನಾಯ್ತಿ ಕೇಳಿದರೂ ಕೊಡಲಿಲ್ಲ. ಇಡಿಯವರ ಈ ವರ್ತನೆ ಪ್ರತೀಕಾರದ ವರ್ತನೆ ಅಲ್ಲದೆ ಏನು ಎಂದು ಪ್ರಶ್ನಿಸುವ ಮೂಲಕ ಟ್ವೀಟ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಇದಕ್ಕೂ ಮೊದಲು ಟ್ವಿಟ್ಟರ್ ನಲ್ಲಿ ಕುಮಾರಸ್ವಾಮಿ ಅವರು, ನಾಡಿನ ಜನರಿಗೆ ಗೌರಿ-ಗಣೇಶ ಹಬ್ಬದ ಶುಭ ಕೋರಿದ್ದಾರೆ. ಪರಿಸರ ಸ್ನೇಹಿಯಾಗಿ ಹಬ್ಬವನ್ನು ಆಚರಿಸುವ ಮೂಲಕ ಎಲ್ಲರಿಗೂ ಮಾದರಿಯಾಗೋಣ. ವಿಘ್ನ ವಿನಾಶಕನು ಎಲ್ಲರ ಬಾಳಲ್ಲೂ ಸುಖ, ಸಂತೋಷ, ಸಮೃದ್ಧಿಯನ್ನು ತರಲಿ ಎಂದು ಹೇಳಿದ್ದಾರೆ.
Advertisement
ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಪರಿಸರ ಸ್ನೇಹಿಯಾಗಿ ಹಬ್ಬವನ್ನು ಆಚರಿಸುವ ಮೂಲಕ ಎಲ್ಲರಿಗೂ ಮಾದರಿಯಾಗೋಣ. ವಿಘ್ನ ವಿನಾಶಕನು ಎಲ್ಲರ ಬಾಳಲ್ಲೂ ಸುಖ, ಸಂತೋಷ, ಸಮೃದ್ಧಿಯನ್ನು ತರಲಿ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 1, 2019