– ರಾಜಕೀಯಕ್ಕೆ ಬೇರೆ ಅವಕಾಶಗಳಿವೆ, ಅಲ್ಲಿ ಮಾಡೋಣ
– ಸಚಿವರ ವಿರುದ್ಧ ಎಚ್‍ಡಿಕೆ ಗರಂ
ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರ ನಡುವಿನ ಟ್ವೀಟ್ ಸಮರ ನಿಲ್ಲುವಂತೆ ಕಾಣುತ್ತಿಲ್ಲ. ಎಚ್.ಕುಮಾರಸ್ವಾಮಿ ಮತ್ತೆ ಸರಣಿ ಟ್ವೀಟ್ ಮಾಡಿ ರಾಜ್ಯ ಸರ್ಕಾರ ಹಾಗೂ ಸಚಿವರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ವಿರೋಧ ಪಕ್ಷದ ನಾಯಕನಾದ ನಾನು ಸರ್ಕಾರಕ್ಕೆ ಸಲಹೆ ನೀಡುವುದು ನನ್ನ ಕರ್ತವ್ಯ, ನನ್ನ ಹಕ್ಕು. ಮತ್ತು, ಅದೇ ವೃತ್ತಿ ಧರ್ಮ. ರಾಜಕೀಯ ಮಾಡಲು ಬೇರೆ ಅವಕಾಶಗಳಿವೆ. ಅಲ್ಲಿ ಮಾಡೋಣ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಹೆಚ್ಚಿದ ಕೊರೊನಾ ಭೀತಿ- ರಾಜ್ಯ ರಾಜಕೀಯದಲ್ಲಿ ಶುರುವಾಯ್ತು ಕೆಸರೆರಚಾಟ
Advertisement
ವಿರೋಧ ಪಕ್ಷದ ನಾಯಕನಾದ ನಾನು ಸರ್ಕಾರಕ್ಕೆ ಸಲಹೆ ನೀಡುವುದು ನನ್ನ ಕರ್ತವ್ಯ, ನನ್ನ ಹಕ್ಕು. ಮತ್ತು, ಅದೇ ವೃತ್ತಿ ಧರ್ಮ. ರಾಜಕೀಯ ಮಾಡಲು ಬೇರೆ ಅವಕಾಶಗಳಿವೆ. ಅಲ್ಲಿ ಮಾಡೋಣ.
(3/4)
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 15, 2020
Advertisement
ಈಗಲೂ ಹೇಳುತ್ತಿದ್ದೇನೆ ಇದು ನನ್ನ ಸಲಹೆ. ಇದರಲ್ಲಿಯೂ ರಾಜಕೀಯ ಹುಡುಕುವವರು ‘ಪ್ರಚಾರ ಪ್ರಿಯ’ರಷ್ಟೇ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೊರೊನಾ ಭೀತಿ- ಸ್ವತಃ ಆದೇಶ ಹೊರಡಿಸಿ ಅದ್ದೂರಿ ಮದ್ವೆಯಲ್ಲಿ ಸಿಎಂ ಭಾಗಿ
Advertisement
ಕೊರೊನಾ ವೈರಸ್ ಕುರಿತು ಸರ್ಕಾರಕ್ಕೆ ಕೆಲ ಸಲಹೆಗಳನ್ನು ನೀಡಿದ್ದೆ. ಇದರಲ್ಲಿ ರಾಜಕೀಯ ಹುಡುಕಿರುವ ಸಚಿವರೊಬ್ಬರು ಸರ್ಕಾರ ಎಲ್ಲ ರೀತಿಯಲ್ಲೂ ಮುಂಜಾಗ್ರತಾ ಕ್ರಮಗಳನ್ನು ವಹಿಸಿರುವುದಾಗಿ ಹೇಳಿದ್ದಾರೆ. ಸರಿ, ಸಿಎಂ ಬಿಎಸ್ವೈ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗದೇ ನಿಯಮ ಉಲ್ಲಂಘಿಸಿದ್ದು ಯಾವ ಕ್ರಮ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕೊರೊನಾ ಭೀತಿ ನಡುವೆಯೇ ಅದ್ದೂರಿ ಮದ್ವೆಯಲ್ಲಿ ಎಚ್‍ಡಿಡಿ ಭಾಗಿ
Advertisement
ಈಗಲೂ ಹೇಳುತ್ತಿದ್ದೇನೆ ಇದು ನನ್ನ ಸಲಹೆ. ಇದರಲ್ಲಿಯೂ ರಾಜಕೀಯ ಹುಡುಕುವವರನ್ನು 'ಪ್ರಚಾರ ಪ್ರಿಯ'ರಷ್ಟೇ.
(4/4)
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 15, 2020
ಕೊರೊನಾ ವೈರಸ್ ತಡೆಗೆ ಮುಂಜಾಗ್ರತೆಯೇ ಮದ್ದು. ಇದಕ್ಕಾಗಿಯೇ ಎಲ್ಲ ವಿಮಾನ ನಿಲ್ದಾಣಗಳಲ್ಲಿ, ಪ್ರತಿಯೊಬ್ಬರ ತಪಾಸಣೆ ನಡೆಯುತ್ತಿದೆ. ಈ ತಪಾಸಣೆಯನ್ನು ಮುಖ್ಯಮಂತ್ರಿಯೇ ನಿರ್ಲಕ್ಷಿಸುವುದು ಎಂಥ ಕಟ್ಟುನಿಟ್ಟಿನ ಕ್ರಮ? ಇದರಿಂದ ಜನರಿಗೆ ಹೋಗುವ ಸಂದೇಶವೇನು? ಈ ಬಗ್ಗೆ ‘ರಾಜಕೀಯ’ ಹುಡುಕಿದ ಸಚಿವರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿ ತಿರುಗೇಟು ಕೊಟ್ಟಿದ್ದಾರೆ.
ಕೊರೋನಾ ವೈರಸ್ ಕುರಿತು ಸರ್ಕಾರಕ್ಕೆ ಕೆಲ ಸಲಹೆಗಳನ್ನು ನೀಡಿದ್ದೆ. ಇದರಲ್ಲಿ ರಾಜಕೀಯ ಹುಡುಕಿರುವ ಸಚಿವರೊಬ್ಬರು ಸರ್ಕಾರ ಎಲ್ಲ ರೀತಿಯಲ್ಲೂ ಮುಂಜಾಗ್ರತಾ ಕ್ರಮಗಳನ್ನು ವಹಿಸಿರುವುದಾಗಿ ಹೇಳಿದ್ದಾರೆ. ಸರಿ, ಸಿಎಂ ಬಿಎಸ್ವೈ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗದೇ ನಿಯಮ ಉಲ್ಲಂಘಿಸಿದ್ದು ಯಾವ ಕ್ರಮ?
(1/4)
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 15, 2020