ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ‘ಪರಂವಃ’ ಸಿನಿಮಾದ ಹಾಡೊಂದನ್ನು ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಹೊಸಬರೇ ಈ ಚಿತ್ರತಂಡದಲ್ಲಿದ್ದು, ವಿಶೇಷ ಕಥೆಯೊಂದನ್ನು ಈ ಚಿತ್ರದಲ್ಲಿ ಹೇಳಲು ಹೊರಟಿದ್ದಾರಂತೆ ಚಿತ್ರತಂಡ. ಹಾಗಾಗಿಯೇ ಕುಮಾರಸ್ವಾಮಿ ಅವರು ಹಾಡು ರಿಲೀಸ್ ಮಾಡುವ ಮೂಲಕ ಚಿತ್ರಕ್ಕೆ ಸಾಥ್ ನೀಡಿದ್ದಾರೆ.
ಪೀಪಲ್ ವರ್ಲ್ಡ್ ಫಿಲಂಸ್ ಲಾಂಛನದಲ್ಲಿ 200 ಜನ ಸ್ನೇಹಿತರು ಸೇರಿ ಸಿನಿಮಾವನ್ನು ನಿರ್ಮಿಸಿದ್ದು, ಪ್ರೇಮ್ ಸಿಡೇಗಲ್, ಮೈತ್ರಿ ಜೆ ಕಶ್ಯಪ್, ಗಣೇಶ್ ಹೆಗ್ಗೋಡು ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಈ ಮಣ್ಣಿನ ಹೆಮ್ಮೆಯ ಕಲೆಯಾದ ವೀರಗಾಸೆಯ ಕುರಿತಾದ ಜೊತೆಗೆ ತಂದೆ ಮಗನ ನಡುವಿನ ಭಾವನಾತ್ಮಕ ಪಯಣದ ಕುರಿತು ಈ ಸಿನಿಮಾದಲ್ಲಿ ಹೇಳಲಾಗಿದೆಯಂತೆ. ಇದನ್ನೂ ಓದಿ:ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಭೂರಿ ಭೋಜನ, ಭರ್ಜರಿ ತಯಾರಿ
ಸಂತೋಷ್ ಕೈದಾಳ ನಿರ್ದೇಶನದಲ್ಲಿ ಪರಂವಃ ಸಿನಿಮಾ ಮೂಡಿ ಬಂದಿದ್ದು, ‘ಕಿರುದೀಪ ನೀ’ ಎಂಬ ಮೂರನೇ ಲಿರಿಕಲ್ ಹಾಡು ಇದೀಗ ಬಿಡುಗಡೆಯಾಗಿದೆ. ಈ ಹಾಡನ್ನು ಗಾಯಕ ಮೆಹಬೂಬ್ ಸಾಬ್ ಹಾಡಿದ್ದು, ನಾಗೇಶ್ ಕುಂದಾಪುರ, ಸಂಕೇತ್ ಅಂಬಲಿ ಹಾಗೂ ಕಿರಣ್ ಎನ್ ಆರ್ ಪುರ ಸೇರಿ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ವೀಕ್ಷಿಸಿದ ಅಶ್ವಿನಿ ಪುನೀತ್ ರಾಜ್‍ಕುಮಾರ್ ಹಾಡನ್ನು ಮೆಚ್ಚಿ, ಚಿತ್ರತಂಡಕ್ಕೆ ಶುಭವಾಗಲೆಂದು ಹಾರೈಸಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]