ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಇಂದು ಒಂದೇ ವಿಮಾನದಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಉಭಯ ನಾಯಕರು ನಂತರ ಅಲ್ಲಿಂದ ಬೇರೆ ಬೇರೆ ಕಾರ್ಯಕ್ರಮಗಳಿಗೆ ತೆರಳಿದ್ದಾರೆ. ಈ ವೇಳೆ ಮಾಧ್ಯಮದವರು ಬಿಎಸ್‍ವೈ ಅವರನ್ನು ಮಾತನಾಡಿಸಿದಾಗ, ಸಿದ್ದರಾಮಯ್ಯನವರನ್ನ ಮಾತನಾಡಿಸಿ ಎಂದು ಹೇಳಿ ತೆರಳಿದರು.
Advertisement
ದಲಿತರಿಗೆ ಅನ್ಯಾಯ ಆಗಿದೆ ಎನ್ನುವುದನ್ನು ಅವರೇ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್‍ನಲ್ಲಿ ಪ್ರತಿ ಸಾರಿಯೂ ಅನ್ಯಾಯ ಆಗುತ್ತಲೇ ಇದೆ. ಕಾಂಗ್ರಸ್ ನಲ್ಲಿಯ ಹಳೆಯ ವಿಚಾರವನ್ನು ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ ಎಂದು ಬಿಎಸ್ ವೈ ಹೇಳಿದ್ದಾರೆ.
Advertisement
ನಾನು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ರಾಜ್ಯ ರಾಜಕಾರಣದಲ್ಲಿ ಇರುತ್ತೇನೆ. ಹೈಕಮಾಂಡ್ ನನಗೆ ಏನು ಹೇಳೋದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Advertisement
ಬಿಎಸ್‍ವೈ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಎಸ್‍ಐಟಿ ರಚನೆ ಮಾಡುವುದು ಸಿಎಂ ಅವರಿಗೆ ಬಿಟ್ಟ ವಿಚಾರವಾಗಿದೆ. ಸುಮಲತಾ ಸ್ವರ್ಧೆ ವಿಚಾರವಾಗಿ ನನ್ನನ್ನು ಭೇಟಿ ಮಾಡಿದ್ದಾರೆ. ಸಮನ್ವಯ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ನಿರ್ಧಾರ ಕೈಗೊಳ್ಳುತ್ತೇವೆ ಅಂದ್ರು.
Advertisement
ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ದಲಿತರಿಗೆ ಕಾಂಗ್ರೆಸ್ ನಲ್ಲಿ ಅನ್ಯಾಯವಾಗುತ್ತಿದೆ ಎನ್ನುವ ಹೇಳಿಕೆ ವಿಚಾರದ ಕುರಿತು ಮಾತನಾಡಿದ ಅವರು, ಈ ಬಗ್ಗೆ ನನಗೆ ಏನು ಗೊತ್ತಿಲ್ಲ. ಈ ಪ್ರಶ್ನೆಯನ್ನು ಪರಮೇಶ್ವರ್ ಅವರ ಬಳಿಯೇ ಕೇಳಿ. ಅವರು ಯಾವ ಮನಸ್ಥಿತಿಯಲ್ಲಿ ಮಾತನಾಡಿದ್ದಾರೆ ಎಂಬುವುದು ನನಗೆ ಗೊತ್ತಿಲ್ಲ ಎಂದು ತಿಳಿಸಿದ್ರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv