– ಯಡಿಯೂರಪ್ಪ ಸಾರ್ವಜನಿಕ ಜೀವನದಲ್ಲಿರಲು ನಾಲಾಯಕ್
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಬಂದು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿ. ಆವಾಗ ಗೊತ್ತಾಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 22 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬಿಜೆಪಿ ನಾಯಕರ ಹೇಳಿಕೆ ವಿಚಾರದ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು ಈ ಚಾಲೆಂಜ್ ಹಾಕಿದ್ದಾರೆ. ಅಲ್ಲದೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಾರ್ವಜನಿಕ ಜೀವನದಲ್ಲಿರಲು ನಾಲಾಯಕ್ ಎಂದು ಲೇವಡಿ ಮಾಡಿದ್ದಾರೆ.
Advertisement
Advertisement
ಪ್ರಧಾನಿ ಮೋದಿಯವರು ಬರೀ ಸುಳ್ಳು ಹೇಳುತ್ತಾರೆ. ಭಾನುವಾರ ರಫೇಲ್ ಬಗ್ಗೆ ದೇಶದ ಚೌಕಿದಾರ ಮಾತಾಡಿಲ್ಲ. ರೈತರ ಸಾಲವನ್ನು ಅವರೇಕೆ ಮನ್ನಾ ಮಾಡಿಲ್ಲ ಎಂದು ಇದೇ ವೇಳೆ ಪ್ರಶ್ನಸಿದ ಸಿದ್ದರಾಮಯ್ಯ, ರೈತರ ಸಾಲಮನ್ನಾ ಮಾಡುವಂತೆ ಎರಡು ಬಾರಿ ನಿಯೋಗ ಹೋಗಿದ್ದೆ. ಅವರು ಇದೂವರೆಗೂ ರೈತರ ಸಾಲಮನ್ನಾ ಮಾಡಿಲ್ಲ. ನಾವು ಈ ವರ್ಷದ ಬಜೆಟ್‍ನಲ್ಲಿ ಸಾಲಮನ್ನಾಕ್ಕೆ ಹಣ ಇಟ್ಟಿದ್ದೇವೆ. ಮೋದಿಯವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೇನು ಗೊತ್ತಿಲ್ಲ ಎಂದು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Advertisement
ಯಡಿಯೂರಪ್ಪ ಸಾರ್ವಜನಿಕ ಜೀವನದಲ್ಲಿ ಇರಲು ನಾಲಾಯಕ್. ಸಿಎಂ ಆಗಿದ್ದವರು ದುಡ್ಡು ಕೊಟ್ಟು ಶಾಸಕರ ಖರೀದಿಗೆ ಯತ್ನಿಸ್ತಿದ್ದಾರೆ. ನನ್ನದೇ ಧ್ವನಿ ಆಗಿದ್ದರೆ ರಾಜೀನಾಮೆ ಕೊಡ್ತೀನಿ ಎಂದು ಹೇಳಿದ್ದರು. ಈಗ ನನ್ನದೇ ಧ್ವನಿ ಅಂತ ಒಪ್ಪಿಕೊಂಡಿದ್ದಾರೆ, ರಾಜೀನಾಮೆ ಕೊಡ್ತಾರಾ ಎಂದು ಬಿಎಸ್‍ವೈ ಅವರನ್ನು ಪ್ರಶ್ನಿಸಿದ್ರು.
Advertisement
ಶರಣಗೌಡ ಅವರಿಗೆ ಬಿಎಸ್ ವೈ ಏನು ಹೇಳಿದ್ದಾರೆ ಹೇಳ್ಲಾ ಎಂದ ಮಾಜಿ ಸಿಎಂ, ಹತ್ತು ಕೋಟಿ ನಿಮ್ಮಪ್ಪನಿಗೆ ಕೊಡ್ತೀವಿ, ಮಂತ್ರಿ ಮಾಡ್ತೀವಿ. ನಿಂಗೆ ಟಿಕೆಟ್ ಕೊಡ್ತೀವಿ ಅಂದಿದ್ದಾರೆ. ಅದು ಕುದುರೆ ವ್ಯಾಪಾರ ಅಲ್ವಾ. ಸಿಎಂ ಆಗಿದ್ದವರು ಶಾಸಕರನ್ನು ಕೊಂಡುಕೊಳ್ಳಲು ಹೊರಟಿದ್ದಾರೆ. ಹೀಗಾಗಿ ಅವರು ಇವರು ಸಾರ್ವಜನಿಕ ಜೀವನದಲ್ಲಿ ಇರಲು ನಾಲಾಯಕ್ ಎಂದು ಸಿದ್ದರಾಮಯ್ಯ ಅವರು ಲೇವಡಿ ಮಾಡಿದ್ದಾರೆ.
ಅಧಿವೇಶನಕ್ಕೆ ನಾಲ್ಕು ಕಾಂಗ್ರೆಸ್ ಶಾಸಕರು ಬಂದಿಲ್ಲ. ಅವರನ್ನು ಡಿಸ್ಕ್ವಾಲಿಫೈ ಮಾಡಲು ಸ್ಪೀಕರ್‍ಗೆ ಮನವಿ ಮಾಡುತ್ತೇವೆ. ಯಡಿಯೂರಪ್ಪ ಕೂಡಲೆ ರಾಜಿನಾಮೆ ಕೊಡಬೇಕು. ಅವರಿಗೆ ಸಾರ್ವಜನಿಕ ಜೀವನದಲ್ಲಿರಲು ನೈತಿಕತೆಯಿಲ್ಲ. ಮೊದಲು ಮಿಮಿಕ್ರಿ ಮಾಡಲಾಗಿದೆ, ಸಾಬೀತುಪಡಿಸಿದ್ರೆ ರಾಜೀನಾಮೆ ಕೊಡ್ತೀನಿ ಅಂದಿದ್ರು. ಈಗ ನಂದೇ ವಾಯ್ಸ್ ಅಂದಿದ್ದಾರೆ. ಹೀಗಾಗಿ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದ್ರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv